ನವದೆಹಲಿ:ಭಾರತ-ಚೀನಾ ಗಡಿಪ್ರದೇಶ ಪೂರ್ವ ಲಡಾಖ್​ನ ಗಲ್ವಾನ್ ಕಣಿವೆಯಲ್ಲಿ ನಿನ್ನೆ ಎರಡೂ ದೇಶಗಳ ಸೈನಿಕರ ನಡುವ ಸಂಘರ್ಷ ಏರ್ಪಟ್ಟು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇತ್ತೀಚೆಗೆಷ್ಟೇ ಟ್ವೀಟ್ ಮಾಡಿ, ಲಡಾಖ್​ನಲ್ಲಿ ಚೀನಾ ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು ಎಂದು ಹೇಳಿದ್ದ ರಾಹುಲ್​ ಗಾಂಧಿ ವಿರುದ್ಧ ಮಿಲಿಟರಿ ಹಿರಿಯ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.ಇದನ್ನೂ ಓದಿ:ದೇಶದಲ್ಲಿ 10 ಸಾವಿರ ದಾಟಿದ ಕರೊನಾಪೀಡಿತರ ಸಾವಿನ ಸಂಖ್ಯೆ
ಇದೀಗ ಚೀನಾ ಸೈನಿಕರ ದಾಳಿಗೆ ಭಾರತದ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್​ ಗಾಂಧಿ, ಇಷ್ಟೆಲ್ಲ ಆಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಮೌನ ವಹಿಸಿದ್ದಾರೆ? ಈಗಲೇ ಸಾಕಷ್ಟು ಆಯಿತು. ಏನಾಗುತ್ತಿದೆ ಎಂಬುದನ್ನು ನಾವು ತಿಳಿಯಬೇಕಿದೆ. ನಮ್ಮ ಯೋಧರನ್ನು ಕೊಲ್ಲಲು , ನಮ್ಮ ಭೂಮಿಯನ್ನು ವಶಪಡಿಸಿಕೊಳ್ಳಲು ಚೀನಾಕ್ಕೆ ಎಷ್ಟು ಧೈರ್ಯ? ಎಂದು ಆಕ್ರೋಶ ಭರಿತರಾಗಿ ಟ್ವೀಟ್ ಮಾಡಿದ್ದಾರೆ.ಭಾರತ-ಚೀನಾ ಗಡಿಯಲ್ಲಿ ಸಂಘರ್ಷ ಶುರುವಾದಾಗಿನಿಂದಲೂ ರಾಹುಲ್​ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ನಿನ್ನೆ ಭಾರತದ ಯೋಧರು ಹುತಾತ್ಮರಾಗುತ್ತಿದ್ದಂತೆ ಟ್ವೀಟ್ ಮೂಲಕವೇ ಸಂತಾಪ ವ್ಯಕ್ತಪಡಿಸಿದ್ದರು. ದೇಶಕ್ಕಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ಸೈನಿಕರ ಸಾವಿನ ನೋವನ್ನು ಶಬ್ದಗಳಲ್ಲಿ ವಿವರಿಸಲು ಆಗುತ್ತಿಲ್ಲ ಎಂದಿದ್ದರು. (ಏಜೆನ್ಸೀಸ್)ಇದನ್ನೂ ಓದಿ:ಸಾವಿನ ವಿಚಾರದಲ್ಲಿ ಆಟ ಆಡಬೇಡಿ!.. ಕಿಡಿಗೇಡಿಗಳಿಗೆ ತೇಜಸ್ವಿನಿ ಖಡಕ್​ ಎಚ್ಚರಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
