ಮುಂಬೈ: ಸಾರ್ವಜನಿಕರೇ ಎಚ್ಚರ! ಮಾಸ್ಕ್​ ಖರೀದಿಸುವಾಗ ಹಲವು ಬಾರಿ ಯೋಚನೆ ಮಾಡಬೇಕಾದ ಸ್ಥಿತಿ ಎದುರಾಗಿದೆ. ಏಕೆಂದರೆ ಬಳಸಿ ಬಿಸಾಡಿದ ಮಾಸ್ಕ್​ಗಳನ್ನು ಸಂಗ್ರಹಿಸಿ ಅವುಗಳನ್ನು ತೊಳೆದು ಇಸ್ತ್ರಿ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ದಂಧೆ ನಡೆಯುತ್ತಿದೆ.
ಮುಂಬೈನ ವಿರಾರ್ ಪ್ರದೇಶದ ಗೋದಾಮು ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು ಬಳಸಿದ ಮಾಸ್ಕ್​ಗಳನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.
ವಿರಾರ್​ ಪೂರ್ವ ಪ್ರದೇಶದಲ್ಲಿ ಮೂವರು ಬಳಸಿದ ಮಾಸ್ಕ್​ಗಳನ್ನು ಪೌರ ಕಾರ್ಮಿಕರಿಂದ ಸಂಗ್ರಹಿಸಿ ಅವುಗಳನ್ನು ವಾಷಿಂಗ್​ ಮಿಷಿನ್​ನಲ್ಲಿ ಹಾಕಿ ಒಗೆದು ನಂತರ ಇಸ್ತಿ ಮಾಡಿ ಪ್ಯಾಕ್​ ಮಾಡುತ್ತಿದ್ದರು. ಪ್ಯಾಕ್​ ಮೇಲೆ ಎನ್​-95 ಮಾಸ್ಕ್​ ಎಂಬ ಲೇಬಲ್​ ಅಂಟಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ತಯಾರಿ ನಡೆಸಿದ್ದರು.
ಪೊಲೀಸರಿಗೆ ಬಂದ ಮಾಹಿತಿ ಆಧರಿಸಿ ಗೋದಾಮು ಮೇಲೆ ದಾಳಿ ನಡೆಸಿದಾಗ ಆರೋಪಿಗಳು ಸಿಕ್ಕಿ ಬಿದ್ದರು.ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಾಸ್ಕ್​ ಧರಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಾಸ್ಕ್​ಗೆ ಬೇಡಿಕೆ ವ್ಯಕ್ತವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಬಳಸಿದ ಮಾಸ್ಕ್​ಗಳನ್ನು ತೊಳೆದು ಮಾರಾಟ ಮಾಡಲು ಮುಂದಾಗಿದ್ದಾರೆ. (ಏಜೆನ್ಸೀಸ್​)
ಮೇ 3ನ್ನೇ ಮೋದಿ ಆಯ್ಕೆ ಮಾಡಿದ್ದೇಕೆ ಗೊತ್ತೆ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × 4 =
Remember me
