ಹಾಸನ:ಸಕಲೇಶಪುರ ಭಾಗದಲ್ಲಿನ ಎತ್ತಿನಹೊಳೆ ಮೊದಲ ಹಂತದ ಕಾಮಗಾರಿ ಬಹುತೇಕ ಮುಕ್ತಾಯದ ಹಂತದಲ್ಲಿದ್ದು, ಮುಂದಿನ ಮಾರ್ಚ್-ಏಪ್ರಿಲ್ ವೇಳೆಗೆ ಇಲ್ಲಿಂದ ನೀರನ್ನು ಎತ್ತುವಳಿ ಮಾಡಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.
ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹೊಳೆ ಕಾಮಗಾರಿ ಸ್ಥಳ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೈಪ್ ಲೈನ್ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು ೩.೫ ಎಕರೆ ಭೂ ಸ್ವಾಧೀನ ಪ್ರಕ್ರಿಯೆಗೆ ರೈತರು ಒಪ್ಪುತ್ತಿಲ್ಲ. ಇವರ ಮನವೊಲಿಸಲು ಅಗತ್ಯ ಭೂ ಸ್ವಾಧೀನಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಕಾಮಗಾರಿ ತ್ವರಿತವಾಗಿ ನಡೆಯಲಿದೆ ಎಂದರು.
ಇದನ್ನೂ ಓದಿ:ಚೀನಾ ವಸ್ತು ಬಹಿಷ್ಕಾರಕ್ಕೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಸಿದ್ಧತೆ
ಇನ್ನು ಮುಂದಿನ ವರ್ಷದ ಮಾರ್ಚ್ ವೇಳೆಗೆ ಎತ್ತಿನಹೊಳೆ ಮೊದಲ ಹಂತದ ಕಾಮಗಾರಿ ಮುಗಿಯಲಿದೆ. ಕೊವಿಡ್ ಸಮಸ್ಯೆಯ ಕಾರಣ ಕೆಲಸಗಾರರು ತಮ್ಮ ತಮ್ಮ ಊರುಗಳಿಗೆ ಹೋಗಿದ್ದಾರೆ. ಬಾಕಿ ಇರುವಷ್ಟು ಕಾರ್ಮಿಕ ರೊಂದಿಗೆ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.
ಇದಲ್ಲದೆ, ಈ ಭಾಗದಲ್ಲಿ ಬೀಳುವ ವಾರ್ಷಿಕ ಮಳೆಯ ಆಧಾರದಲ್ಲಿ ಯೋಜನೆಗೆ ಎಷ್ಟು ಟಿಎಂಸಿ ನೀರು ಹರಿದುಬರಲಿದೆ ಎಂದು ಅಂದಾಜಿಸಲಾಗಿದೆ. ಸುಮಾರು ೨೧ ಟಿಎಂಸಿ ನೀರು ಸರಬರಾಜು ಮಾಡುವ ಯೋಜನೆ ಇದಾಗಿದೆ. ಜತೆಗೆ ಕಾಮಗಾರಿಗೆ ಆರಂಭದಲ್ಲಿ ೧೨ ಸಾವಿರ ಕೋಟಿ ಯೋಜನೆ ರೂಪಿಸಲಾಗಿತ್ತು ಆದರೆ ಹಲವು ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಯೋಜನೆ ವೆಚ್ಚವು ಹೆಚ್ಚಾಗುತ್ತಲೆ ಇದೆ. ಯೋಜನೆಯಿಂದ ಹಲವು ಜಿಲ್ಲೆಗೆ ಕುಡಿವ ನೀರಿನ ಸಮಸ್ಯೆ ಬಗಹರೆಯುವ ಕಾರಣ ಸರ್ಕಾರ ಯೊಜನೆಗೆ ಎಲ್ಲಾ ರೀತಿಯ ನೆರವನ್ನು ನೀಡಲಿದೆ ಎಂದು ಹೇಳಿದರು.
ಇದನ್ನೂ ಓದಿ:ಸಚಿವ ಸುರೇಶ್ ಕುಮಾರ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು!
ಇದೇ ವೇಳೆ ಕೋವಿಡ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಮಾಸ್ಕ್ ಬಳಕೆಯ ಕುರಿತು ಜನಜಾಗೃತಿ ಮೂಡಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ಹಾಗೂ ಸಕಲೇಶಪುರ ತಾಲೂಕು ಆಡಳಿತ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾಸ್ಕ್ ಡೇ ಅಭಿಯಾನಕ್ಕೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದರು.
ಚೀನಾ ಜಾಹೀರಾತು ಬಿಡಿ, ಯೋಧರನ್ನು ಗೌರವಿಸಿ: ಅಭಿಯಾನಕ್ಕೆ ತಾರೆಯರಿಗೆ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + thirteen =
Remember me
