ಜೈಪುರ:ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು ಬಾಬಾ ಸಾಹೇಬ್​ ಡಾ. ಬಿ. ಆರ್. ಅಂಬೇಡ್ಕರ್​ ಅವರು ಬರೆದಿರುವ ಸಂವಿಧಾನವನ್ನು ಬದಲಿಸಲು ಮುಂದಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಆದರೆ, ಅಂಬೇಡ್ಕರ್ ಅವರೇ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ. ಏಕೆಂದರೆ ಸಂವಿಧಾನವು ನಮ್ಮ ಸರ್ಕಾರಕ್ಕೆ ಗೀತೆ, ಕುರಾನ್, ಬೈಬಲ್ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ರಾಜಸ್ಥಾನದ ಬಾರ್ಮೆರ್​ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನಮ್ಮ ಸರ್ಕಾರಕ್ಕೆ ಸಂವಿಧಾನ ಸರ್ವಶ್ರೇಷ್ಠವಾಗಿದೆ. ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನದ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಿ ಜನರಿಂದ ಅನುಕಂಪ ಗಿಟ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
#WATCH| During a public rally in Rajasthan's Barmer, PM Modi says, "There is a need to be cautious of the lies of Congress and INDIA alliance who insult Baba Saheb and the Constitution."pic.twitter.com/J86IyBFh07
ಇದನ್ನೂ ಓದಿ:ಈದ್​ ಹಬ್ಬದಂದು ನೆಚ್ಚಿನ ನಟನನ್ನು ನೋಡಲು ಬಂದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೋ ವೈರಲ್
ಕಾಂಗ್ರೆಸ್​ ಪಕ್ಷವು ಅನೇಕ ಬಾರಿ ಅಂಬೇಡ್ಕರ್​ ಅವರನ್ನು ಅವಮಾನಿಸಿದೆ. ಸಂವಿಧಾನ ದಿನವನ್ನು ಪ್ರಸ್ತಾಪಿಸಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್​ ಎಂದಿಗೂ ಇದರ ಬಗ್ಗೆ ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷವು ಸಂವಿಧನ್ ದಿವಸ್ ಅನ್ನು ವಿರೋಧಿಸಿದೆ ಮತ್ತು ಸಂಸತ್ತಿನಲ್ಲಿ ಅದರ ವಿರುದ್ಧ ಭಾಷಣಗಳನ್ನು ಮಾಡಿದೆ. ಅಂಬೇಡ್ಕರ್​ ಅವರಿಗೆ ಸಂಬಂಧಿಸಿದ ಸ್ಥಳಗಳನ್ನು ಅಭಿವೃದ್ಧಿಪಡಿಸಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್​ ಎಂದಿಗೂ ಅದರ ಬಗ್ಗೆ ಯೋಚನೆಯೂ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳಿಗೆ ಮತ ಹಾಕಲು ಸಿದ್ದವಾಗಿದ್ದು, ಕಾಂಗ್ರೆಸ್​ ನೇತೃತ್ವದ ಇಂಡಿಯಾ ಮೈತ್ರಿಕೂಟ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
"Even if BR Ambedkar himself comes & demands the change of constitution, it won't happen. This government treats the constitution as it treats Geeta, Bible & Quran."PM@narendramodiji blasts Congress over their misinformed attack of BJP wanting to change the constitution.pic.twitter.com/eEIysk1Sey
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 4 =
Remember me
