ನವದೆಹಲಿ:ನೀವು ಮಂಗಳ ಗ್ರಹದಲ್ಲಿ ಸಿಲುಕಿಕೊಂಡರೂ ಭಾರತೀಯ ರಾಯಭಾರ ಕಚೇರಿ ನಿಮ್ಮ ನೆರವಿಗೆ ಇರಲಿದೆ ಎಂಬುದಾಗಿ ಕೇಂದ್ರ ಸಚಿವ ವಿ.ಕೆ. ಸಿಂಗ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಯೂಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ವಿಚಾರವಾಗಿ ಅವರು ಈ ಸ್ಪಷ್ಟನೆ ನೀಡಿದರು.
ಸಮಸ್ಯೆಯಲ್ಲಿ ಸಿಲುಕಿದ ಯಾವುದೇ ಭಾರತೀಯನನ್ನು ಅಲ್ಲೇ ಉಳಿಯುವಂತೆ ಮಾಡುವುದಿಲ್ಲ. ಯುದ್ಧರಂಗದಲ್ಲಿ ಗಡಿಯ ಎರಡೂ ಭಾಗದಲ್ಲಿ ಕೆಲವು ನಿರ್ಬಂಧ, ಗೊಂದಲ, ಘರ್ಷಣೆ ಸಹಜ. ನೀವು ತಾಳ್ಮೆಯಿಂದ ಇರದಿದ್ದರೆ, ನಿಯಮಗಳನ್ನು ಪಾಲಿಸದಿದ್ದರೆ ಸಮಸ್ಯೆಳಾಗಬಹುದು ಎಂದು ಅವರು ಕಿವಿಮಾತು ಕೂಡ ಹೇಳಿದ್ದಾರೆ.
ಇದನ್ನೂ ಓದಿ:ವೇದಿಕೆಯಲ್ಲಿ ಪತ್ನಿಯನ್ನು ಕೂರಿಸಿಕೊಂಡ ರೇಣುಕಾಚಾರ್ಯ; ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ
ನೀವು ಮಂಗಳ ಗ್ರಹದಲ್ಲಿ ಸಿಲುಕಿಕೊಂಡರೂ ಭಾರತೀಯ ರಾಯಭಾರ ನಿಮ್ಮ ನೆರವಿಗೆ ಬರಲಿದೆ ಎಂಬ ತತ್ವದ ಮೇಲೆ ಮೋದಿ ನೇತೃತ್ವದ ಸರ್ಕಾರ ನಡೆಯುತ್ತಿದೆ. ಪ್ರಧಾನಿ ದೂರದೃಷ್ಟಿಯಿಂದ ಯೋಚನೆ ಮಾಡಿದ್ದು, ಸಮಸ್ಯೆಯಲ್ಲಿ ಸಿಲುಕಿರುವ ಭಾರತೀಯರೊಂದಿಗೆ ಹೆಚ್ಚಿನ ಸಮನ್ವಯ ಸಾಧಿಸಲು 4 ಸಚಿವರನ್ನು ಯೂಕ್ರೇನ್​ನ​ ನೆರೆಹೊರೆಯ ದೇಶಗಳಿಗೆ ಕಳುಹಿಸಲು ನಿರ್ಧರಿಸಿದ್ದಾರೆ ಎಂದೂ ಹೇಳಿದರು.
70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

ಸಬ್​ ರಿಜಿಸ್ಟ್ರಾರ್​ ಕಚೇರಿ ಇನ್ಮುಂದೆ ಮತ್ತಷ್ಟು ‘ಓಪನ್’; ಮಹಿಳಾ ಸಿಬ್ಬಂದಿಗೆ ಸಂಕಷ್ಟ!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − five =
Remember me
