ನವದೆಹಲಿ:ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದಿಗೆ 9 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ದೇಶದ ಸೇವೆಯಲ್ಲಿ ನಾವಿಂದು 9 ವರ್ಷಗಳನ್ನು ಪೂರೈಸಿರುತ್ತಿರುವ ಈ ಸಂದರ್ಭದಲ್ಲಿ ನನ್ನ ಹೃದಯ ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದೆ. ನಾವು ಮಾಡಿದ ಪ್ರತಿಯೊಂದು ನಿರ್ಧಾರ, ಪ್ರತಿಯೊಂದು ಕ್ರಮ ಜನರ ಜೀವನವನ್ನು ಸುಧಾರಿಸುವ ಉದ್ದೇಶವಾಗಿತ್ತು. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವು ಇನ್ನೂ ಹೆಚ್ಚು ಶ್ರಮಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ:ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರನಿಗೆ ಬಿಸಿನೀರು ಎರಚಿ, ಬಾಟಲ್​ನಿಂದ ಹಲ್ಲೆ ಮಾಡಿ ಪ್ರೇಯಸಿ ಎಸ್ಕೇಪ್​!
Today, as we complete 9 years in service to the nation, I am filled with humility and gratitude. Every decision made, every action taken, has been guided by the desire to improve the lives of people. We will keep working even harder to build a developed India.#9YearsOfSeva
— Narendra Modi (@narendramodi)May 30, 2023

ಬಿಜೆಪಿಯು ಇಂದಿನಿಂದ ದೇಶದಾದ್ಯಂತ ಒಂದು ತಿಂಗಳ ಕಾಲ ವಿಶೇಷ ಸಂಪರ್ಕ ಅಭಿಯಾನವನ್ನು ಯೋಜಿಸಿದೆ. ಕಳೆದ ಒಂಬತ್ತು ವರ್ಷಗಳಲ್ಲಿ “ರಾಷ್ಟ್ರವೇ ಮೊದಲು” ಎಂಬ ಮಂತ್ರದೊಂದಿಗೆ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ “ಅಭೂತಪೂರ್ವ” ಅಭಿವೃದ್ಧಿಯನ್ನು ಕಂಡಿದೆ ಎಂದು ಬಿಜೆಪಿ ಪಕ್ಷವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ವಿಪಕ್ಷಗಳ ಬಹಿಷ್ಕಾರದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಭಾನುವಾರ ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು. ನೂತನ ಕಟ್ಟಡವನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಬಣ್ಣಿಸಿದ ಅವರು, ಅದರ ನಿರ್ಮಾಣದಲ್ಲಿ ತೊಡಗಿರುವ ಕೆಲ ಕಾರ್ಮಿಕರನ್ನು ಸನ್ಮಾನಿಸಿದರು.
ಇದನ್ನೂ ಓದಿ:ನಟ ಬಾಲಯ್ಯ ವಿಡಿಯೋ ಮೂಲಕ ಪೊಲೀಸರಿಗೆ ತಿರುಗೇಟು ಕೊಟ್ಟ ನಟಿ ಡಿಂಪಲ್​ ಹಯಾತಿ!
ನರೇಂದ್ರ ಮೋದಿ ಅವರು 2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎರಡನೇ ಅವಧಿಗೆ 2019ರ ಮೇ 30ರಂದು ಪ್ರಮಾಣ ವಚನ ಸ್ವೀಕರಿಸಿದರು.(ಏಜೆನ್ಸೀಸ್​)
2 ತಿಂಗಳಲ್ಲಿ ಮೂರು ಮರಿಗಳು ಸೇರಿ 6 ಚೀತಾ ಸಾವು: ಕೇಂದ್ರ ಸರ್ಕಾರ ಕೊಟ್ಟ ಉತ್ತರ ಹೀಗಿದೆ….

ಪರಿಷತ್​ಗೆ ಶುರುವಾಯ್ತು ಪೈಪೋಟಿ: ಏಳು ಸ್ಥಾನಕ್ಕೆ ಎರಡೂವರೆ ಡಜನ್ ಆಕಾಂಕ್ಷಿಗಳು

ನಟ ಬಾಲಯ್ಯ ವಿಡಿಯೋ ಮೂಲಕ ಪೊಲೀಸರಿಗೆ ತಿರುಗೇಟು ಕೊಟ್ಟ ನಟಿ ಡಿಂಪಲ್​ ಹಯಾತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − three =
Remember me
