ಪಟನಾ:ಬಿಹಾರದ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್​ ಅವರು ದೇಶದ ಅತ್ಯುನ್ನತ ಗೌರವ ಭಾರತ ರತ್ನ (ಮರಣೋತ್ತರ) ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಇಂದು ಸಂಜೆ ಪ್ರಶಸ್ತಿಯನ್ನು ಘೋಷಣೆ ಮಾಡಿದರು.
ಠಾಕೂರ್​ ಅವರು ನಿಧನರಾಗಿ 35 ವರ್ಷಗಳ ಬಳಿಕ ಈ ಪ್ರಶಸ್ತಿ ಒಲಿದಿದೆ. 1988, ಫೆಬ್ರವರಿ 17ರಂದು ಠಾಕೂರ್​ ವಿಧಿವಶರಾದರು. ಜನನಾಯಕ ಎಂದೇ ಪ್ರಖ್ಯಾತಿ ಪಡೆದಿದ್ದ ಠಾಕೂರ್ ಅವರು ಅಲ್ಪಾವಧಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 1970ರ ಡಿಸೆಂಬರ್​ನಿಂದ 1971ರ ಜೂನ್ ವರೆಗೆ ಮತ್ತು 1977ರ ಡಿಸೆಂಬರ್​ನಿಂದ 1979ರ ಏಪ್ರಿಲ್ ವರೆಗೆ ಮುಖ್ಯಮಂತ್ರಿಯಾಗಿದ್ದರು.
ರಾಜ್ಯದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗೆ ಕೇಂದ್ರದ ಅತ್ಯುನ್ನತ ಗೌರವ ಸಿಕ್ಕಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಜನತಾ ದಳ ಯುನೈಟೆಡ್ ಪಕ್ಷದ ದೀರ್ಘಕಾಲದಿಂದ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಟ್ಟಿತ್ತು. ಇಂದು ಆ ಬೇಡಿಕೆ ಈಡೇರಿದೆ.
ಬಿಹಾರ ರಾಜ್ಯವು 40 ಸಂಸದೀಯ ಸ್ಥಾನಗಳನ್ನು ಹೊಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿರುವುದು ಅಲ್ಲಿನ ಜನರನ್ನು ಮೆಚ್ಚಿಸುವ ಜಾಣ ನಡೆ ಎಂದು ರಾಜಕೀಯ ವಲಯದಲ್ಲಿ ಬಹಳ ಚರ್ಚೆಯಾಗುತ್ತಿದೆ.(ಏಜೆನ್ಸೀಸ್​)
ಆಹ್ವಾನವಿದ್ದರೂ ಕೊಹ್ಲಿ, ರೋಹಿತ್​, ಧೋನಿ ಅಯೋಧ್ಯೆಗೆ ಬರಲಿಲ್ಲ ಏಕೆ? ಕಾರಣ ಇಲ್ಲಿದೆ…

ಜಗತ್ತಿನಲ್ಲಿ ಅತಿ ಹೆಚ್ಚು ಬಲಿಯಾಗುವ ಜೀವಿ ಯಾವುದು ಗೊತ್ತಾ? ಹುಬ್ಬೇರಿಸುವ ಮಾಹಿತಿ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
