ಹರಿಯಾಣ:ಮಹತ್ವದ ಬೆಳವಣಿಗೆ ಒಂದರಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಒಂದು ದಿನದ ಬಳಿಕ ಮಾಜಿ ಸಿಎಂ ಮನೊಹರ್​ ಲಾಲ್​ ಖಟ್ಟರ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಹರಿಯಾಣ ವಿಧಾನಸಭೆಯನ್ನು ಉದ್ಧೇಶಿಸಿ ಮಾತನಾಡಿದ ಖಟ್ಟರ್​, ನಾನು ಇಂದು (ಮಾರ್ಚ್​ 13) ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇಂದಿನಿಂದ ಕರ್ನಾಲ್​ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ನಯಾಬ್​ ಸಿಂಗ್​ ಸೈನಿ ಅವರು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
#WATCH| Former Haryana CM Manohar Lal Khattar says, "…I announce today that I am resigning from the post of MLA from Karnal Assembly seat. Now from today, our CM Nayab Saini will take over the responsibility of Karnal Assembly…"pic.twitter.com/UGstOJV3oG
ಇದನ್ನೂ ಓದಿ:ಮುಂಬರುವ ಟಿ-20 ವಿಶ್ವಕಪ್​ನಿಂದ ವಿರಾಟ್​ ಕೊಹ್ಲಿಗೆ ಕೊಕ್​; ಕಾರಣ ಹೀಗಿದೆ
ಇತ್ತ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದ್ದು, ಇದರ ಬೆನ್ನಲ್ಲೇ ಮನೋಹರ್ ಲಾಲ್​ ಖಟ್ಟರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇತ್ತ ಮನೋಹರ್​ ಲಾಲ್​ ಖಟ್ಟರ್​ ಅವರನ್ನು ಬಿಜೆಪಿ ಕರ್ನಾಲ್​ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಬಿಜೆಪಿ ಸಂಜಯ್​ ಭಾಟಿಯಾ ಪ್ರಸ್ತುತ ಹರಿಯಾಣ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಹಿರಿಯ ನಾಯಕ ಖಟ್ಟರ್​ಗೆ ದಾರಿ ಮಾಡಿಕೊಡಲಿದ್ದಾರ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
