ಆಂಧ್ರಪ್ರದೇಶ:ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ವೈಎಸ್​ಆರ್​​ಸಿಪಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.
ಒಂದು ವಾರದ ಹಿಂದೆಯಷ್ಟೇ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ಅವರು ವೈಎಸ್​ಆರ್ ( ಯುವಜನ ಶ್ರಮಿಕ ರೈತ ಕಾಂಗ್ರೆಸ್​ ಪಕ್ಷ )​ ಪಕ್ಷ ಸೇರಿ ರಾಜಕೀಯ ಇನಿಂಗ್ಸ್​ ಆರಂಭಿಸಿದ್ದ ರಾಯುಡು ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಮಾಹಿತಿ ಹಂಚಿಕೊಂಡಿರುವ ರಾಯುಡು ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಅಲ್ಲದೆ ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ಬಯಸಿದ್ದೇನೆ. ನನ್ನ ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸುತ್ತೇನೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
ಅಂಬಾಟಿ ರಾಯುಡು ವೈಎಸ್​ಆರ್​ಸಿಪಿ ಪಕ್ಷವನ್ನು ತೊರೆಯುತ್ತೇನೆ ಎಂದು ಹೇಳಿದ ತಕ್ಷಣ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿ ದುಷ್ಟರ ಜೊತೆಯಲ್ಲಿ ನಿಮ್ಮ ರಾಜಕೀಯ ಇನ್ನಿಂಗ್ಸ್ ಆಡದಿರುವುದನ್ನು ನೋಡಿ ತುಂಬಾ ಸಂತೋಷವಾಯಿತು. ನಿಮ್ಮ ಮುಂದಿನ ಜೀವನ ಸುಖಕರವಾಗಿರಲಿ ಎಂದು ಎಕ್ಸ್ ನಲ್ಲಿ ಪೋಸ್ಟ್​ ಮಾಡಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಟಿವಿ ಸೀತಾ-ರಾಮರಿಗೆ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 19 =
Remember me
