ನವದೆಹಲಿ:ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಸಿಬಿಐ ಬಂಧನಕ್ಕೆ ಒಳಗಾಗಿದ್ದರು. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರಿದ್ದ ಏಕಸದಸ್ಯ ಪೀಠ ಇಂದು (ಮೇ30) ಜಾಮೀನು ಅರ್ಜಿ ನಿರಾಕರಿಸಿ ತೀರ್ಪು ಪ್ರಕಟಿಸಿದೆ.
ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಉಪಮುಖ್ಯಮಂತ್ರಿಯಾಗಿದ್ದಾಗ ಸಿಸೋಡಿಯಾ 18 ಖಾತೆಗಳನ್ನು ಹೊಂದಿದ್ದರು. ಜಾಮೀನು ನೀಡಿದಲ್ಲಿ ಪೂರಕ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಅವರಿಗೆ ಜಾಮೀನು ನೀಡಲಾಗುವುದಿಲ್ಲ ಹೇಳಿದೆ.
ಮನೀಶ್ ಸಿಸೋಡಿಯಾ ಸದ್ಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಕಳೆದ ಫೆಬ್ರವರಿ 26 ರಂದು ಸಿಬಿಐ ಬಂಧನಕ್ಕೊಳಗಾಗಿದ್ದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
