ಭೋಪಾಲ್:ಭೋಪಾಲ್ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ನವೆಂಬರ್ 17 ರಂದು ಮತದಾನ ನಡೆಯಲಿದೆ. ಆದರೆ, ಮತದಾನಕ್ಕೂ ಮುನ್ನವೇ ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ. ಮಾಜಿ ಸಚಿವ ರುಸ್ತಮ್ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಹಿರಿಯ ಬಿಜೆಪಿ ನಾಯಕ ಮತ್ತು ಮಧ್ಯಪ್ರದೇಶ ಸರ್ಕಾರದ ಸಚಿವ ರುಸ್ತಮ್ ಸಿಂಗ್ ಅವರು ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಮುನ್ನ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜ್ಯ ಬಿಜೆಪಿ ಅಧ್ಯಕ್ಷ ವಿಷ್ಣು ದತ್ ಶರ್ಮಾ ಅವರಿಗೆ ಪತ್ರದ ಮೂಲಕ ರಾಜೀನಾಮೆ ಬಗ್ಗೆ ತಿಳಿಸಿದ್ದಾರೆ.
ಪಕ್ಷ ಸರಿಯಾಗಿ ನಡೆಸಿಕೊಳ್ಳಲಿಲ್ಲಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣು ದತ್ ಶರ್ಮಾ ಅವರಿಗೆ ಪತ್ರ ಬರೆದಿರುವ 78 ವರ್ಷದ ರುಸ್ತಮ್ ಸಿಂಗ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ‘ರುಸ್ತಮ್ ಸಿಂಗ್ ಅವರನ್ನು ಪಕ್ಷ ಸರಿಯಾಗಿ ನಡೆಸಿಕೊಳ್ಳಲಿಲ್ಲ, ಈ ಕಾರಣಕ್ಕಾಗಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ’ ಎಂದು ರುಸ್ತಮ್ ಸಿಂಗ್ ಅವರ ನಿಕಟ ಮೂಲವೊಂದು ಹೇಳಿಕೊಂಡಿದೆ.
ರುಸ್ತಮ್ ಸಿಂಗ್ ಪುತ್ರನಿಗೆ ಟಿಕೆಟ್ ನೀಡಿದ ಬಿಎಸ್ಪಿಬಹುಜನ ಸಮಾಜ ಪಕ್ಷವು ರುಸ್ತಮ್ ಸಿಂಗ್ ಅವರ ಪುತ್ರ ರಾಕೇಶ್ ಸಿಂಗ್ ಅವರಿಗೆ ಮೊರೆನಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಅಂದಿನಿಂದ, ರುಸ್ತಮ್ ಸಿಂಗ್ ತನ್ನ ಮಗನ ಪರ ಪ್ರಚಾರ ಮಾಡಲು ಆಡಳಿತಾರೂಢ ಬಿಜೆಪಿಯನ್ನು ತೊರೆಯಬಹುದು ಎಂಬ ಊಹಾಪೋಹ ಇತ್ತು.
2003ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ರುಸ್ತಮ್ ಸಿಂಗ್ಗ್ವಾಲಿಯರ್-ಚಂಬಲ್ ಪ್ರದೇಶದ ಪ್ರಭಾವಿ ಗುರ್ಜರ್ ನಾಯಕರಾದ ರುಸ್ತಮ್ ಸಿಂಗ್ ಅವರು 2003 ರಲ್ಲಿ ಭಾರತೀಯ ಪೊಲೀಸ್ ಸೇವೆ (IPS) ಕೆಲಸಕ್ಕೆ ರಾಜೀನಾಮೆ ನೀಡಿದ್ದರು, ನಂತರ ಬಿಜೆಪಿ ಸೇರಿದರು. ರುಸ್ತಮ್ ಸಿಂಗ್ ಅವರು 2003 ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದಿದ್ದರು. ಇದಾದ ಬಳಿಕ 2013ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾದರು.
ನವೆಂಬರ್ 17 ರಂದು ಮತದಾನಎರಡೂ ಬಾರಿ ಶಾಸಕರಾಗಿ ಆಯ್ಕೆಯಾದ ನಂತರ ರುಸ್ತಮ್ ಸಿಂಗ್ ಅವರನ್ನು ಮಧ್ಯಪ್ರದೇಶ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಲಾಯಿತು. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17 ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
ತಮಿಳುನಾಡಿನಲ್ಲಿ ಬಿಜೆಪಿಗೆ ದೊಡ್ಡ ಹೊಡೆತ; ಪಕ್ಷಕ್ಕೆ ನಟಿ ಗೌತಮಿ ತಡಿಮಲ್ಲ ರಾಜೀನಾಮೆ, ಗಂಭೀರ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − five =
Remember me
