ನವದೆಹಲಿ:ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಎಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆ ಕುರಿತು ಹೇಳಿಕೆ ನೀಡಿದ್ದ ಅಮರಿಂದರ್​ ಸಿಂಗ್​ ಅವರಿಗೆ  ಉನ್ನತ ಹುದ್ದೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿವೆ. ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ.
ಲಂಡನ್​ನಲ್ಲಿ ಬೆನ್ನುಮೂಳೆ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿರುವ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರು ಅಲ್ಲಿಂದ ವಾಪಸ್ಸಾದ ಬಳಿಕ ತಮ್ಮ ಪಕ್ಷ ಪಂಜಾಬ್​ ಲೋಕ ಕಾಂಗ್ರೆಸ್​​ ಅನ್ನು ಬಿಜೆಪಿಯೊಂದಿಗೆ ವಿಲೀನ ಮಾಡುವ ಬಗ್ಗೆ ಸ್ವತಃ ಅವರೇ ಬಹಿರಂಗಪಡಿಸಿದ್ದರು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಿಂಗ್ ಕಾಂಗ್ರೆಸ್ ತೊರೆದ ನಂತರ ಪಿಎಲ್ ಸಿ ಪಕ್ಷವನ್ನು ಕಟ್ಟಿದ್ದರು.
ಎರಡು ಬಾರಿ ಸಿಎಂ, ಶಾಸಕರಾಗಿ ಹಾಗೂ 4 ಬಾರಿ ಸಂಸತ್​ ಸದಸ್ಯರಾಗಿ ಆಯ್ಕೆಯಾದ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ ಎನ್ನಲಾಗಿದೆ. ಇದೇ ಆಗಸ್ಟ್​​ 10 ರಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರವಧಿ ಮುಕ್ತಾಯಗೊಳ್ಳಲಿದೆ.
ಸದ್ಯ ಅಮರಿಂದರ್​ ಸಿಂಗ್ ಅವರನ್ನು ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಲಂಡನ್​ನಿಂದ ವಾಪಸ್ಸಾದ ಬಳಿಕ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ.(ಏಜೆನ್ಸೀಸ್​)
ಉದಯಪುರ ಹತ್ಯೆ ಪ್ರಕರಣ: 10 ದಿನಗಳ ಕಾಲ ಆರೋಪಿಗಳು ಎನ್​ಐಎ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − seven =
Remember me
