ರಾಜಸ್ಥಾನ:ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಜತೆಗೆ ಹೆಜ್ಜೆ ಹಾಕಿದ್ದಾರೆ. ಇಂದು (ಡಿ.14) ಬೆಳಗ್ಗೆ ರಾಜಸ್ಥಾನದ ಸವಾಯಿ ಮಾಧೋಪುರದ ಭಡೋತಿಯಿಂದ ಆರಂಭವಾದ ಯಾತ್ರೆಯಲ್ಲಿ ರಾಘುರಾಮ್ ರಾಜನ್ ಪಾಲ್ಗೊಂಡಿದ್ದಾರೆ.
ಆರ್​​ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಈ ಹಿಂದೆ ಬಿಜೆಪಿ ಆಡಳಿತದ ಹಣಕಾಸು, ಆರ್ಥಿಕ ಮತ್ತು ಸಾಮಾಜಿಕ ನೀತಿಗಳ ಬಗ್ಗೆ ತಮ್ಮ ನಿಲುವು, ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು. ಇದಿರಿಂದ ರಘುರಾಮ್ ರಾಜನ್ ಹಲವು ಟೀಕೆಗಳನ್ನು ಎದುರಿಸಬೇಕಾಗಿ ಬಂದಿತ್ತು. ನೋಟ್ ಬ್ಯಾನ್ ನಿರ್ಧಾರವನ್ನು ರಾಜನ್ ವಿರೋಧಿಸಿದ್ದರು. ಇದೀಗ ರಘುರಾಮ್ ರಾಜನ್ ಕಾಂಗ್ರೆಸ್ ನೇತೃತ್ವದ ಭಾರತ್ ಜೋಡೀ ಯಾತ್ರೆಯಲ್ಲಿ ಪಾಲ್ಗೊಂಡಿರುವುದು ಹಲವರ ಟೀಕೆಗಳಿಗೆ ದಾರಿ ಮಾಡಿಕೊಟ್ಟಂತಾಗಿದೆ.
ಹಲವು ಟೀಕೆಗಳನ್ನು ಎದುರಿಸಿದ್ದಂತಹ ಸಂದರ್ಭದಲ್ಲಿ ರಘುರಾಮ್ ರಾಜನ್ ಮಾತನಾಡುತ್ತಾ, ನಾನು ಪ್ರತಿಯೊಂದು ವಿಚಾರವನ್ನೂ ವಿಮರ್ಷೆ ಮಾಡುತ್ತೇನೆ. ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗಲೂ ನಾನು ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳಿಕೊಂಡಿದ್ದೇನೆ ಎಂದು ಹೇಳಿದ್ದರು.
ಸೆ. 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಂಚರಿಸಿದೆ. ಇದೀಗ ರಾಜಸ್ಥಾನದಲ್ಲಿದ್ದು 2023ರ ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ.(ಏಜೆನ್ಸೀಸ್)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 3 =
Remember me
