ಕೊಟ್ಟಯಾಂ:ಜ್ಯೋತಿಷಿಯಾಗಿ ಬದಲಾಗಿರುವ ನಿವೃತ್ತ ಯೋಧನೊಬ್ಬ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಕೇರಳದ ವೈಕೊಮ್​ನಲ್ಲಿ ನಡೆದಿದೆ. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಟಿವಿ ಪುರಂ ಮೂಲದ ಸುದರ್ಶನ್​ (55) ಎಂದು ಗುರುತಿಸಲಾಗಿದೆ. 2022ರ ನವೆಂಬರ್​ನಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಈಗ ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವಳು. ಆಕೆಯ ಮೇಲೆ ಆರೋಪಿ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ದೇವರು ಏನು ಕೊಟ್ಟಿದ್ದಾನೋ ಅದನ್ನು ಬಿಟ್ಟು ಬೇರೇನೂ ಇಲ್ಲ! ಸೌಂದರ್ಯದ ವದಂತಿಗೆ ಹನಿ ರೋಸ್​ ಸ್ಪಷ್ಟನೆ
ದೌರ್ಜನ್ಯ ಸಂಗತಿ ಬಯಲಿಗೆ ಬಂದಾಗ ಸಂತ್ರಸ್ತೆ ಕುಟುಂಬಕ್ಕೆ ಆರೋಪಿ ಕೊಲೆ ಬೆದರಿಕೆ ಹಾಕಿದ್ದ. ಅಲ್ಲದೆ, ಫೋಟೋ ಮತ್ತು ವಿಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದ. ಈ ಸಂಗತಿಯನ್ನು ತನ್ನ ಫ್ರೆಂಡ್ಸ್​ ಮತ್ತು ಕ್ಲಾಸ್​ ಟೀಚರ್​ಗೆ ಸಂತ್ರಸ್ತೆ ತಿಳಿಸಿದ್ದಳು. ಬಳಿಕ ಶಾಲಾ ಆಡಳಿತ ಮಂಡಳಿ ವೈಕೊಮ್​ ಪೊಲೀಸರಿಗೂ ಮತ್ತು ಪರಿಶಿಷ್ಠ ಜಾತಿ ಅಭಿವೃದ್ಧಿ ಇಲಾಖೆಯ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿದರು.
ಜುಲೈ 22ರಂದು ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿ, ಪ್ರಕರಣ ದಾಖಲಿಸಿಕೊಂಡರು. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್​ ಆಗಿದ್ದ. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.(ಏಜೆನ್ಸೀಸ್​)
ಧಾರಾಕಾರ ಮಳೆಗೆ ಶಾಲಾ ಕೊಠಡಿಗಳೇ ಕುಸಿತ; ಸ್ವಲ್ಪದರಲ್ಲೇ ತಪ್ಪಿತು ಭಾರಿ ದುರಂತ!

ರೈಲಿನಲ್ಲಿ ಪ್ರಯಾಣಿಸುವಾಗ ಈ ತಪ್ಪುಗಳನ್ನು ಮಾಡಬೇಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eight =
Remember me
