ಭೋಪಾಲ್:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 52 ವರ್ಷದ ನಿವೃತ್ತ ಸೇನಾ ಸೈನಿಕನೊಬ್ಬ ತನ್ನ ಸಹೋದರ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು ತನ್ನ ಸ್ವಂತ ಮಗಳನ್ನೇ ಗಾಯಗೊಳಿಸಿದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಸನೌಧಾ ಪೊಲೀಸ್ ಠಾಣೆ ವ್ಯಾಪ್ತಿಯ ಲಾಲೆಪುರ್ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ರಾಮಧರ್ 2019ರಲ್ಲಿ ಸೇನೆಯಿಂದ ನಿವೃತ್ತರಾಗಿದ್ದರು ಎನ್ನಲಾಗಿದೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ರಾಮಧರ್ ತಿವಾರಿ ಶುಕ್ರವಾರ ಬೆಳಿಗ್ಗೆ ತನ್ನ ಪತ್ನಿಯೊಂದಿಗೆ ಜಗಳವಾಡಿದ್ದನು. ನಿವೃತ್ತ ಯೋಧನ ಸಹೋದರ ರಾಮ್ ಮಿಲನ್ ತಿವಾರಿ (60) ಮಧ್ಯಪ್ರವೇಶಿಸಿದಾಗ ರಾಮಧರ್ ಅವರ ಮೇಲೆ ಗುಂಡು ಹಾರಿಸಿದ್ದಾನೆ. ನಂತರ, ಅವರ ಸೋದರಳಿಯ ಅಜ್ಜು ತಿವಾರಿ (35) ತನ್ನ ತಂದೆಯನ್ನು ರಕ್ಷಿಸಲು ಧಾವಿಸಿದಾಗ, ರಾಮಧರ್ ಅವರ ಮೇಲೂ ಗುಂಡು ಹಾರಿಸಿದ್ದಾನೆ. ಅವರು ತಮ್ಮ ಮಗಳು ವರ್ಷಾ ತಿವಾರಿ (24) ಅವರ ಮೇಲೂ ಗುಂಡು ಹಾರಿಸಿದ್ದು, ಯುವತಿಯ ಕಾಲಿಗೆ ಗಾಯವಾಗಿದೆ. ರಾಮ್ ಮಿಲನ್ ಮತ್ತು ಅಜ್ಜು ಸ್ಥಳದಲ್ಲೇ ಮೃತಪಟ್ಟರೆ, ವರ್ಷಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಆರೋಪಿ ತನ್ನ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಸಾಗರ್ ನಗರದ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಾಗರ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ. ವಿವಾದದ ಹಿಂದಿನ ಕಾರಣ ಮತ್ತು ಅಪರಾಧಕ್ಕೆ ನಿಖರವಾಗಿ ಕಾರಣವೇನು ಎಂಬುದನ್ನು ಕಂಡುಹಿಡಿಯಲು ಪ್ರಕರಣದ ವಿಚಾರಣೆ ಮತ್ತು ತನಿಖೆ ನಡೆಯುತ್ತಿದೆ.(ಏಜೆನ್ಸೀಸ್)
10 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಯಾರ್‍ಯಾರು ಎಲ್ಲೆಲ್ಲಿಗೆ ಶಿಫ್ಟ್?

ಅನೂರ್ಜಿತ ಮದುವೆಯಿಂದಾಗಿ ಹುಟ್ಟಿದ ಮಕ್ಕಳಿಗೂ ಆಸ್ತಿಯಲ್ಲಿ ಪಾಲಿದೆ: ಸುಪ್ರೀಂ ಕೋರ್ಟ್

ಇಸ್ರೋ- ನಾಸಾ ಹೆಸರು ಹೇಳಿಕೊಂಡು ರೈತನಿಗೆ 1 ಕೋಟಿ ರೂ. ವಂಚನೆ; ಸಿಕ್ಕಿದ್ದು ವಿಶೇಷ ಗುಣಗಳ ಕಂಚಿನ ಚೊಂಬು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 4 =
Remember me
