ಚೆನ್ನೈ:ತಮಿಳುನಾಡಿನ ಮಾಜಿ ಪೊಲೀಸ್​ ಮಹಾ ನಿರ್ದೇಶಕ ರಾಜೇಶ್​ ದಾಸ್​ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಸಾಬೀತಾಗಿದ್ದು, ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ರಾಜೇಶ್​ ದಾಸ್​ ಅವರನ್ನು ತಮಿಳುನಾಡಿನ ವಿಲ್ಲುಪುರಂ ನ್ಯಾಯಾಲಯ ಅಪರಾಧಿ ಎಂದು ಪರಿಗಣಿಸಿದ್ದು, ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದೇ ಆರೋಪದ ಮೇಲೆ ಈಗಾಗಲೇ ಅಮಾನತಿನಲ್ಲಿದ್ದ, ರಾಜೇಶ್​ ದಾಸ್​, ಇದೀಗ ಕಂಬಿ ಎಣಿಸುವಂತಾಗಿದೆ.
ಇದನ್ನೂ ಓದಿ:ಹಸಿಬಿಸಿ ದೃಶ್ಯಗಳಲ್ಲಿ ತಮನ್ನಾ ನಟನೆ: ಜಾಲತಾಣದಲ್ಲಿ ವಿಡಿಯೋ ವೈರಲ್​, ಮಿಲ್ಕಿ ಬ್ಯೂಟಿ ವಿರುದ್ಧ ಕೆಂಡಕಾರಿದ ಫ್ಯಾನ್ಸ್​
ಸಂತ್ರಸ್ತ ಮಹಿಳಾ ಐಪಿಎಸ್​ ಅಧಿಕಾರಿಯು, ಹಿರಿಯ ಅಧಿಕಾರಿಯಾಗಿದ್ದ ರಾಜೇಶ್​ ದಾಸ್​ ವಿರುದ್ಧ 2021ರ ಫೆಬ್ರವರಿಯಲ್ಲಿ ದೂರು ದಾಖಲಿಸಿದ್ದರು. ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ಭದ್ರತಾ ಕರ್ತವ್ಯಕ್ಕೆ ತೆರಳುವಾಗ ರಾಜೇಶ್​ ದಾಸ್​ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಅಂದಿನ ಎಐಎಡಿಎಂಕೆ ಸರ್ಕಾರ ದಾಸ್​ ಅವರನ್ನು ಅಮಾನತು ಮಾಡಿತ್ತು ಮತ್ತು ಪ್ರಕರಣದ ತನಿಖೆಗೆ ಆರು ಸದಸ್ಯರ ಸಮಿತಿ ರಚನೆ ಮಾಡಿತ್ತು.
ಈ ಪ್ರಕರಣದಲ್ಲಿ ನ್ಯಾಯಾಲಯ ಪೊಲೀಸ್​ ಸಿಬ್ಬಂದಿ ಸೇರಿದಂತೆ 68 ಮಂದಿಯಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದು, ಇದೀಗ ಶಿಕ್ಷೆಯನ್ನು ವಿಧಿಸಿದೆ. ಅಲ್ಲದೆ, ಮೇಲ್ಮನವಿ ಸಲ್ಲಿಸಲು ರಾಜೇಶ್​ ದಾಸ್​ಗೆ ಅವಕಾಶ ನೀಡಲಾಗಿದೆ ಮತ್ತು ತಕ್ಷಣದ ಜಾಮೀನು ಪಡೆಯಬಹುದು ಎಂದು ಕೋರ್ಟ್​ ತಿಳಿಸಿದೆ.
ಈ ಘಟನೆ 2021ರಲ್ಲಿ ಚುನಾವಣಾ ವಿಷಯವಾಗಿ ಬದಲಾಗಿತ್ತು ಮತ್ತು ಆಗಿನ ಪ್ರತಿಪಕ್ಷದ ನಾಯಕರಾಗಿದ್ದ ಎಂಕೆ ಸ್ಟಾಲಿನ್ ಅವರು ಅಧಿಕಾರಕ್ಕೆ ಬಂದರೆ, ಸರಿಯಾದ ಕಾನೂನು ಪ್ರಕ್ರಿಯೆ ನಡೆಸಿ, ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದ್ದರು.(ಏಜೆನ್ಸೀಸ್​)
ಸ್ನೇಹಿತನಿಗೆ 52 ಲಕ್ಷ ರೂ. ಮೌಲ್ಯದ ದುಬಾರಿ ಕಾರು ಗಿಫ್ಟ್ ಕೊಟ್ಟ ಧ್ರುವ ಸರ್ಜಾ

ಸಂಬಂಧಿಕರ ಮದುವೆ ಮುಗಿಸಿ ಮನೆಗೆ ಮರಳುವಾಗ ಮಾರ್ಗಮಧ್ಯೆ ತಾಯಿ, ಮಗಳು ಭೀಕರ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
