ಪಟ್ನಾ:ವಾಕಿಂಗ್​ಗೆಂದು ತೆರಳಿದ್ದ ನಿವೃತ್ತ ಶಿಕ್ಷಕರೊಬ್ಬರ ಮೇಲೆ ದುಷ್ಕರ್ಮಿಗಳ ಗುಂಪೊಂದು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಬೇಗುಸರಾಯ್​ ಜಿಲ್ಲೆಯಲ್ಲಿ ನಡೆದಿದೆ. ಇವರು ಕೊಲೆ ಪ್ರಕರಣ ಒಂದರ ಪ್ರತ್ಯಕ್ಷದರ್ಶಿಯಾಗಿದ್ದರು ಎಂದು ತಿಳಿದು ಬಂದಿದೆ.
ಮೃತರನ್ನು ಜವಹಾರ್​ ಚೌಧರಿ(70) ಎಂದು ಗುರುತಿಸಲಾಗಿದೆ. ಬೇಗುಸರಾಯ್​ ಜಿಲ್ಲೆ ಫತೇಹ್​ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಭೂ ವ್ಯಾಜ್ಯ ಸಂಬಂಧ ಜವಹಾರ್​ ಚೌಧರಿ ಅವರ ಹತ್ಯೆಯಾಗಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು.
ಇದನ್ನೂ ಓದಿ:ಕಾಂಗ್ರೆಸ್​ನವರಿಂದ ನೀರಿನ ಹಕ್ಕು ರಕ್ಷಣೆ ಸಾಧ್ಯವಿಲ್ಲ: ಎಚ್​.ಡಿ. ಕುಮಾರಸ್ವಾಮಿ
2021ರ ಫೆಬ್ರವರಿ ತಿಂಗಳಲ್ಲಿ ಜವಹಾರ್​ ಅವರ ಮಗನನ್ನು ಹತ್ಯೆ ಮಾಡಲಾಗಿತ್ತು. ಇವರು ಹತ್ಯೆ ಪ್ರಕರಣದ ಪ್ರತ್ಯಕ್ಷದರ್ಶಿಯಾಗಿದ್ದರು ಎಂದು ತಿಳಿದು ಬಂದಿದೆ. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಕೆಲವು ದಿನಗಳಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆ ಇತ್ತು ಎಂದು ಹೇಳಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ಸರಣಿ ಕೊಲೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಹಲವು ಪ್ರಶ್ನೆಗಳು ಉದ್ಭವಿಸುತ್ತಿವೆ. ಈ ನಿಟ್ಟಿನಲ್ಲಿ ಕಠಿಣ ಕಾನೂನಿನ ಅಗತ್ಯವಿದ್ದು, ಸರ್ಕಾರ ಇದರ ಬಗ್ಗೆ ಚಿಂತಿಸಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
