ಅಹಮದಾಬಾದ್​:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಮತ್ತು ಆತನ ಪತ್ನಿ ಮೆಲಾನಿಯಾ ಟ್ರಂಪ್​ ಫೆ.24ಮತ್ತು 25ರಂದು ಭಾರತಕ್ಕೆ ಬರಲಿದ್ದು ಅದಕ್ಕೆ ಭಾರತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಟ್ರಂಪ್​ ಅಹಮದಾಬಾದ್​ನ ಮೊಟೆರಾದಲ್ಲಿರುವ ನಿರ್ಮಿಸಲಾಗಿರುವ ನೂತನ ಕ್ರೀಡಾಂಗಣವೊಂದನ್ನು ಉದ್ಘಾಟನೆ ಮಾಡಲಿದ್ದು ಕಾರ್ಯಕ್ರಮಕ್ಕೆ ಬರುವ ಅತಿಥಿಗಳನ್ನು ಹೊರತುಪಡಿಸಿ ಬೇರೆಲ್ಲರೂ 1.5 ಕಿ.ಮೀ ದೂರ ನಡೆಯಬೇಕಾಗುತ್ತದೆ ಎನ್ನಲಾಗಿದೆ.
ಮೊಟೆರಾ ಕ್ರೀಡಾಂಗಣದಲ್ಲಿ ಸುಮಾರು 1.2 ಲಕ್ಷ ಜನರು ಕುಳಿತುಕೊಂಡು ಕಾರ್ಯಕ್ರಮವನ್ನು ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ. ವಾಹನಗಳ ಪಾರ್ಕಿಂಗ್​ಗೆ ಸುತ್ತಲಿನ 1.5 ಕಿ.ಮೀ ವಿಸ್ತಾರದ ಜಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು ಬರುವ ಅತಿಥಿಗಳಿಗೆ ಪ್ರತ್ಯೇಕ ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಅತಿಥಿಗಳನ್ನು ಹೊರತು ಪಡಿಸಿ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರೆಲ್ಲರೂ 1.5 ಕಿ.ಮೀ. ದೂರ ನಡೆದು ಕಾರ್ಯಕ್ರಮಕ್ಕೆ ಹಾಜರಾಗಬೇಕಾಗುತ್ತದೆ.
ಅಹಮದಾಬಾದ್​ನ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಮತ್ತು ಟ್ರಂಪ್​ ಅಲ್ಲಿಂದ ಸಬರಮತಿ ಆಶ್ರಮಕ್ಕೆ ತೆರಳಲಿದ್ದು ಅಲ್ಲಿಂದ ಕ್ರೀಡಾಂಗಣದವರೆಗೆ ರೋಡ್​ ಶೋ ಮೂಲಕ ತೆರಳಲಿದ್ದಾರೆ. 22 ಕಿ.ಮೀ. ರೋಡ್​ ಶೋಗೆ ವ್ಯವಸ್ಥೆ ಮಾಡಲಾಗಿದ್ದು, 11,000 ಪೊಲೀಸರನ್ನು ಸುರಕ್ಷತೆಗೆ ನೇಮಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 11 =
Remember me
