ನವದೆಹಲಿ:ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಸಿಬಿಐ ಹಾಗೂ ಇ.ಡಿ ಗೆ ಶುಕ್ರವಾರ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ಇಸ್ರೇಲ್ ಜೊತೆಗಿನ ಆಮದು-ರಫ್ತನ್ನು ಸ್ಥಗಿತಗೊಳಿಸಲು ಟರ್ಕಿ ನಿರ್ಧಾರ
ಏ. 30ರಂದು ಸಿಸೋಡಿಯಾ ಅವರಿಗೆ ಜಾಮೀನು ಮಂಜೂರು ಮಾಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಿಸೋಡಿಯಾ ಹೈಕೋರ್ಟ್‌ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸ್ವರ್ಣಕಾಂತ ಶರ್ಮಾ ಅವರಿದ್ದ ಪೀಠ, ಸಿಬಿಐ ಹಾಗೂ ಇ.ಡಿಗೆ ನೋಟಿಸ್ ಜಾರಿ ಮಾಡಿತು. ಅಷ್ಟೇ ಅಲ್ಲದೆ ಮೇ 8ರಂದು ಪ್ರಕರಣವದ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ತಮ್ಮ ಅರ್ಜಿಗಳ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ವಾರಕ್ಕೊಮ್ಮೆ ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ಅವಕಾಶ ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಮುಂದುವರಿಸುವಂತೆ ನ್ಯಾಯಾಲಯಕ್ಕೆ ಸಿಸೋಡಿಯಾ ಮನವಿ ಮಾಡಿಕೊಂಡರು. ಇದರಿಂದ ತನಿಖಾ ಸಂಸ್ಥೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಇಡಿ ಪರ ವಕೀಲರು ತಿಳಿಸಿದ್ದರಿಂದ ನ್ಯಾಯಮೂರ್ತಿ ಶರ್ಮಾ ಅವರು ಮನವಿಯನ್ನು ಅನುಮತಿಸಿದರು.
2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಕ್ರಮವಾಗಿ ಸಲ್ಲಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯವು ವಜಾಗೊಳಿಸಿದೆ.
2023ರ ಫೆಬ್ರವರಿ 26 ರಂದು ಸಿಬಿಐ ಬಂಧಿಸಿದ ನಂತರ ಸಿಸೋಡಿಯಾ ಬಂಧನದಲ್ಲಿದ್ದಾರೆ. ಬಳಿಕ ಇಡಿ ಅವರನ್ನು ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಸಹ ಬಂಧಿಸಲಾಗಿದೆ.
ಬೆಂಗಳೂರಲ್ಲಿ ಅನುಷ್ಕಾ ಹುಟ್ಟುಹಬ್ಬ..ಡಿನ್ನರ್​ ಪಾರ್ಟಿಗೆ ಕೊಹ್ಲಿ, ಗೆಳೆಯರು ಮಾತ್ರ ಭಾಗಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
