ನವದೆಹಲಿ:2012ರ ಡಿಸೆಂಬರ್​ನಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಂತಿಮ ತೀರ್ಪು ಬರೋಬ್ಬರಿ ಏಳು ವರ್ಷಗಳ ಬಳಿಕ ಹೊರಬಿದ್ದಿದೆ.  ಜ.22ರಂದು ಎಲ್ಲ ಅಪರಾಧಿಗಳನ್ನೂ ಗಲ್ಲಿಗೇರಿಸುವಂತೆ ದೆಹಲಿ ಪಟಿಯಾಲಾ ನ್ಯಾಯಾಲಯ ಡೆತ್​ವಾರೆಂಟ್​ ಜಾರಿ ಮಾಡಿದೆ.
ಈ ತೀರ್ಪು ಹೊರಬೀಳುತ್ತಲೇ ನಿರ್ಭಯಾ ತಾಯಿ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಅಂತೂ ನನ್ನ ಮಗಳಿಗೆ ನ್ಯಾಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಅಂತಿಮಗೊಳಿಸುವ ಮೂಲಕ ಮಹಿಳೆಯರ ಸುರಕ್ಷತೆಗೆ ಮಹತ್ವ ನೀಡಲಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಹೆಚ್ಚಾಯಿತು. ನಮ್ಮ ಹೋರಾಟ ಮುಕ್ತಾಯವಾಯಿತು ಎಂದು ನಿರ್ಭಯಾ ತಾಯಿ ಆಶಾದೇವಿ ಹೇಳಿದ್ದಾರೆ.
ಇಂದು ಪಟಿಯಾಲಾ ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆ ನಾವು ಸುಪ್ರೀಂಕೋರ್ಟ್​ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸುತ್ತೇವೆ ಎಂದು ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್​ ಹೇಳಿದ್ದಾರೆ.
ಆದರೆ ಏನೇ ಕಾನೂನು ಪ್ರಕಾರ ಯಾವುದೇ ಪ್ರಕ್ರಿಯೆ ನಡೆಸಲೂ ಅಪರಾಧಿಗಳಿಗೆ ಇರುವುದು ಇನ್ನು 14 ದಿನಗಳು ಮಾತ್ರ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + four =
Remember me
