ಚೆನ್ನೈ:ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಅನೇಕ ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕ್ವಾರಿ ಕೆಲಸಕ್ಕಾಗಿ ಸ್ಫೋಟಕಗಳನ್ನು ಒಂದು ಕೊಠಡಿಯಲ್ಲಿ ಶೇಖರಿಸಲಾಗಿತ್ತು. ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಸ್ತುತ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸಲಾಗುತ್ತಿದೆ.
ಓವರ್​ಲೋಡ್​ ಟ್ರಕ್​ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳದಿರುವ ಬಗ್ಗೆ ಅನೇಕ ದಿನಗಳಿಂದ ದೂರುಗಳು ಬರುತ್ತಿದ್ದವು. ಸ್ಫೋಟದ ಮೊದಲು ಕ್ವಾರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ. ಘಟನೆ ಹಿನ್ನೆಲೆಯಲ್ಲಿ ಕಲ್ಲು ಕ್ವಾರಿ ಶಾಶ್ವತವಾಗಿ ಮುಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
4TV UPDATES * Four killed in stone quarry explosion in Tamil Nadu's Kariapattipic.twitter.com/rPWR5eoWIv
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × five =
Remember me
