ಮುಂಬೈ:ದೇಶದ ಪ್ರಸಿದ್ಧ ಉದ್ಯಮಿ ಮುಕೇಶ್​ ಅಂಬಾನಿಯವರ ಮುಂಬೈ ನಿವಾಸದ ಬಳಿ ಸ್ಫೋಟಕ ವಸ್ತುಗಳು ತುಂಬಿರುವ ಕಾರೊಂದು ಕಾಣಿಸಿಕೊಂಡಿದೆ. ಸ್ಥಳಕ್ಕೆ ಬಂದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮುಂಬೈನ ಪೆಡ್ಡಾರ್ ರಸ್ತೆಯಲ್ಲಿರುವ ಆಂಟಿಲಿಯಾ ನಿವಾಸದ ಬಳಿ ಸ್ಕಾರ್ಪಿಯೋ ಗಾಡಿ ಒಂದು ಸಾಕಷ್ಟು ಸಮಯದಿಂದ ನಿಂತಿದ್ದನ್ನು ಅಂಬಾನಿಯವರ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಆ ಮಾಹಿತಿಯನ್ನು ಮುಂಬೈ ಪೊಲೀಸರಿಗೆ ಕೊಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಬಾಂಬ್​ ನಿಗ್ರಹ ದಳಕ್ಕೂ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಕಾರಿನ ಒಳಗೆ ಪರಿಶೀಲನೆ ನಡೆಸಿದಾಗ ಅದರಲ್ಲಿ 20 20 ಜೆಲಾಟಿನ್ ಸ್ಟಿಕ್‌ಗಳು ಕಾಣಿಸಿವೆ. ಇವುಗಳನ್ನು ಸ್ಫೋಟಕ ತಯಾರು ಮಾಡಲು ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನಪಡೆಯೂ ಬಂದಿದ್ದು ಪರಿಶೀಲನೆ ನಡೆಸಿದೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಶ್ರೀಲಂಕಾಕ್ಕೆ 362 ಕೋಟಿ ರೂಪಾಯಿ ಸಾಲ ಕೊಡಲು ಮುಂದಾದ ಪಾಕಿಸ್ತಾನ!

ಗಂಡ ಹೆಂಡತಿ ಇದ್ದರೇ ಕುಟುಂಬ; ಸಲಿಂಗ ವಿವಾಹವನ್ನು ಕಾನೂನಾತ್ಮಕವಾಗಿ ಒಪ್ಪಲು ಅಸಾಧ್ಯವೆಂದ ಕೇಂದ್ರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + 4 =
Remember me
