ನವದೆಹಲಿ:ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ವಾಹನಗಳಿಗೆ ಸಂಬಂಧಿಸಿದ ಎಲ್ಲ ದಾಖಲೆ ಪತ್ರಗಳ ಸಿಂಧುತ್ವವನ್ನು 2021 ಸೆಪ್ಟೆಂಬರ್​ 30ರವರೆಗೆ ವಿಸ್ತರಿಸಿದೆ. ಕರೊನಾ ಸಾಂಕ್ರಾಮಿಕತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ. ಫಿಟ್​ನೆಸ್​, ಪರ್ಮಿಟ್​, ಚಾಲನಾ ಪರವಾನಗಿ ಮತ್ತು ರಿಜಿಸ್ಟ್ರೆಷನ್​ ಸರ್ಟಿಫಿಕೆಟ್​ ಮುಂತಾದವುಗಳ ಸಿಂಧುತ್ವ ದಿನಾಂಕ ವಿಸ್ತರಣೆಗೊಂಡಿದೆ.
2020 ೆಬ್ರವರಿ 1ರಿಂದ ಅವಧಿ ಮುಗಿದ ಅಥವಾ 2021 ಸೆಪ್ಟೆಂಬರ್​ 30ರೊಳಗೆ ವಾಯಿದೆ ಅಂತ್ಯಗೊಳ್ಳುವ ಈ ಎಲ್ಲ ದಾಖಲೆಗಳಿಗೆ ಇದು ಅನ್ವಯವಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ಇದರಿಂದ ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಸಾರಿಗೆ ಸಂಬಂಧಿತ ಸೇವೆಗಳನ್ನು ಪಡೆಯಲು ಸಹಾಯಕವಾಗುತ್ತದೆ. ಈ ಎಲ್ಲ ದಾಖಲೆಗಳನ್ನು 2021 ಸೆಪ್ಟೆಂಬರ್​ 30ರವರೆಗೆ ಸಿಂಧುವಾಗಿ ಪರಿಗಣಿಸುವಂತೆ ಸಂಬಂಧಪಟ್ಟ ಎಲ್ಲ ಪ್ರಾಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವಾಲಯ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
