ದೆಹಲಿ:ಬಯೋಕಾನ್​ ಕಂಪನಿಯ ಕಾರ್ಯನಿರ್ವಾಹಕ ಮುಖ್ಯಸ್ಥರಾದ ಕಿರಣ್​ ಮಜುಂದಾರ್​ ಶಾ ಅವರು 2020ನೇ ಸಾಲಿನ ಪ್ರತಿಷ್ಠಿತ ಎರ್ನೆಸ್ಟ್ ಆ್ಯಂಡ್ ಎಂಗ್ ವಿಶ್ವದ ವರ್ಷದ ಉದ್ಯಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ:ಆನೆಗಳನ್ನು ಹೀಗೆ ದಾರುಣವಾಗಿ ಕೊಲ್ಲುವುದು ಕೇರಳದಲ್ಲಿ ಮಾಮೂಲಿಯಂತೆ!
ಪ್ರಶಸ್ತಿಯ 20 ವರ್ಷಗಳ ಇತಿಹಾಸದಲ್ಲಿ, ಈ ಪ್ರಶಸ್ತಿಗೆ ಭಾಜನರಾದ ಮೂರನೇ ಭಾರತೀಯ ವ್ಯಕ್ತಿ ಇವರಾಗಿದ್ದಾರೆ. ಕೊಟಕ್ ಮಹೀಂದ್ರಾ ಬ್ಯಾಂಕ್​ ನ ಉದಯ್ ಕೊಟಕ್ (2014) ಮತ್ತು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್ ನ ನಾರಾಯಣ ಮೂರ್ತಿ (2005) ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ:ಮಾಲ್, ಹೋಟೆಲ್ ದೇಗುಲ ಎಂಟ್ರಿ ಟೈಟ್: ವೃದ್ಧರು, ಮಕ್ಕಳು, ಗರ್ಭಿಣಿಯರಿಗಿಲ್ಲ ಪ್ರವೇಶ
2011ರಲ್ಲಿ ಸಿಂಗಪುರದ ಹೈಫ್ಲಕ್ಸ್ ಲಿಮಿಟೆಡ್‌ನ ಒಲಿವಿಯಾ ಲುಮ್ ಅವರ ನಂತರ ಈ ಪ್ರಶಸ್ತಿಯನ್ನು ಪಡೆದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೂ ಮಜುಂದಾರ್ ಶಾ ಪಾತ್ರರಾಗಿದ್ದಾರೆ. 67 ವರ್ಷದ ಮಜುಂದಾರ್-ಶಾ 1978 ರಲ್ಲಿ ಕೇವಲ ಇಬ್ಬರು ಉದ್ಯೋಗಿಗಳು ಮತ್ತು 500 ಡಾಲರ್​​​​ದೊಂದಿಗೆ ಬಯೋಕಾನ್ ಕಂಪನಿಯನ್ನು ಸ್ಥಾಪಿಸಿದರು.
ಇದನ್ನೂ ಓದಿ:ಗ್ಲೋಬಲ್ ವ್ಯಾಕ್ಸಿನ್ ಅಲಯನ್ಸ್ “ಗವಿ” ಖಾತೆಗೆ 15 ದಶಲಕ್ಷ ಡಾಲರ್ : ಪ್ರಧಾನಿ ಮೋದಿ ವಾಗ್ದಾನ
ವರ್ಚುವಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರನ್ನು ಗುರುವಾರ ಇವೈ ‘2020 ರ ವಿಶ್ವ ಉದ್ಯಮಿ’ ಎಂದು ಘೋಷಿಸಲಾಯಿತು. 41 ದೇಶಗಳು ಮತ್ತು ಪ್ರಾಂತ್ಯಗಳ 46 ಸ್ಫರ್ಧಿಗಳನ್ನು ಹಿಂದಿಕ್ಕಿ ಅವರು ಜಯ ಸಾಧಿಸಿದ್ದಾರೆ.
ರಾಜ್ಯಸಭಾ ಚುನಾವಣೆ: ಪಕ್ಷದಿಂದ ಯಾವ ಆದೇಶ ಬರುತ್ತದೋ ಅದನ್ನು ಪಾಲಿಸುತ್ತೇನೆ- ಡಾ. ವಿಜಯ ಸಂಕೇಶ್ವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
