ನವದೆಹಲಿ:ವಿಶ್ವದ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಬಳಕೆದಾರರಿಗೆ ಆ್ಯಂಡ್ರಾಯ್ಡ್​​, ಐಒಎಸ್​ ಹಾಗೂ ಪಿಸಿಯಲ್ಲಿ ಬಳಸಲು ಸಮಸ್ಯೆ ಎದುರಾಗಿದೆ.
ಜಗತ್ತಿನಾದ್ಯಂತ ರಾತ್ರಿ 9:00 ಗಂಟೆ ಸುಮಾರಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣ ಎಕ್ಸ್​ (ಈ ಹಿಂದೆ ಟ್ವಿಟರ್​)ನಲ್ಲಿ#Zuckerberg, #facebookDown, #InstagramDownಎಂಬ ಹ್ಯಾಶ್​​ಟ್ಯಾಗ್ ಟ್ರೆಂಡ್​ ಆಗುತ್ತಿದೆ.
This is X (Formerly Twitter) after Instagram, Facebook and Whatsapp are down#instagramdown#facebookdownpic.twitter.com/uG0IMZiFOs
ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್​ಬುಕ್​ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆ್ಯಪ್​ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಏಕಾಏಕಿ ತನ್ನಷ್ಟಕ್ಕೆ ತಾನೇ ಲಾಗೌಟ್ ಆಗಿವೆ. ​ಇದರಿಂದ ಬಳಕೆದಾರರು ಕಂಗಲಾಗಿದ್ದಾರೆ.
ಏಕಾಏಕಿ ಖಾತೆಗಳು ಲಾಗೌಟ್ ಆಗಿರುವುದು ಏಕೆ ಎನ್ನುವುದು ಬಳಕೆದಾರರ ಪ್ರಶ್ನೆಯಾಗಿದೆ. ತನ್ನಷ್ಟಕ್ಕೆ ತಾನೇ ಲಗೌಟ್ ಆಗಿದ್ದರಿಂದ ಪಾಸ್​ವರ್ಡ್​ ಮರೆತವರು ಮತ್ತು ಬೇರೆಯವರ ಕಡೆಯಿಂದ ಫೇಸ್ಬುಕ್ ಖಾತೆ ಸೃಷ್ಟಿಸಿಕೊಂಡವರಿಗೆ ಮತ್ತೆ ಲಾಗಿನ್ ಆಗುವುದು ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + 8 =
Remember me
