ಹೈದರಾಬಾದ್ :ಕರ್ನಾಟಕ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಸೋಪು, ಅದರ ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ.
ಇದನ್ನೂ ಓದಿ:
ನಕಲಿ ಸಾಬೂನು ಉತ್ಪಾದನೆಯಲ್ಲಿ ತೊಡಗಿದ್ದ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬವನನ್ನು ಬಂಧಿಸಲಾಗಿದೆ. ಅಲ್ಲಿನ ಮಾಲಕಪೇಟೆ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ಮುಂದುವರೆದಿದೆ.
ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್​ಡಿಎಲ್)ಅಧ್ಯಕ್ಷ ಎಂ.ಬಿ.ಪಾಟೀಲ ಅವರಿಗೆ‌ ಅನಾಮಧೇಯ ಕರೆಯೊಂದು ಬಂದಿದ್ದು, ಅವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ಕ್ರಮ ಜರುಗಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದ್​​ನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ತನಿಖೆಗೆ ಮುಂದಾಗಿದ್ದರು.
ತನಿಖೆಯ ವೇಳೆ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆಎಸ್​​ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪ್ರವೃತ್ತರಾದರು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆಎಸ್​​ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.
ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್​​​ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
