ಬೆಂಗಳೂರು:ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರ ಹೆಸರಿನಲ್ಲಿ ಕೆಲ ಕಿಡಿಗೇಡಿಗಳು ಹೇಳಿಕೆಗಳನ್ನು ಹರಿಯಬಿಡುತ್ತಿದ್ದಾರೆ.
‘ಐ ಆ್ಯಮ್ ಕಾಂಗ್ರೆಸ್’ ಎಂಬ ಲೋಗೋ, ನ್ಯಾ. ಸಂತೋಷ್​ ಹೆಗ್ಡೆ ಅವರ ಫೋಟೋ ಬಳಸಿ ಬಿಜೆಪಿ ಸರ್ಕಾರದ ವಿರುದ್ಧ ಅವಹೇಳನಾಕಾರಿ ಹೇಳಿಕೆ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ದುಷ್ಕರ್ಮಿಗಳು ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಗರಂ ಆಗಿರುವ ನ್ಯಾ. ಸಂತೋಷ್​ ಹೆಗ್ಡೆ, ‘ನನ್ನದಲ್ಲದ ಹೇಳಿಕೆ ಅಥವಾ ನನ್ನ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ನನ್ಮ ಹೆಸರು ದುರ್ಬಳಕೆ ಮಾಡಿಕೊಂಡಲ್ಲಿ ಸಹಿಸುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿರಿತಾರಕಕ್ಕೇರಿದೆ ‘ಕುದುರೆ’ ವಿಷ್ಯ; ಜನರಿಂದ ತಿರಸ್ಕರಿಸಲ್ಪಟ್ಟ ಸಿ.ಪಿ.ಯೋಗೇಶ್ವರ್ ‘ಸತ್ತ ಕುದುರೆ’!
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನ್ಯಾ. ಸಂತೋಷ್ ಹೆಗ್ಡೆ, ‘ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ತಮಗೆ ಬೇಕಾದ ರೀತಿಯಲ್ಲಿ ಹೇಳಿಕೆಗಳನ್ನು ಸೃಷ್ಟಿಸಿ ಇದು ಸಂತೋಷ್ ಹೆಗ್ಡೆ ಅವರ ಸ್ಟೇಟ್​ಮೆಂಟ್ ಎಂಬಂತೆ ಅನೇಕ ಬಾರಿ ಬಿಂಬಿಸುವ ಪ್ರಯತ್ನ ನಡೆದಿದೆ. ಇದು ಸರಿಯಲ್ಲ. ವ್ಯವಸ್ಥೆ ವಿರುದ್ಧ ನಾನು ಸಾಕಷ್ಟು ಬಾರಿ ಧ್ವನಿ ಎತ್ತಿದ್ದೇನೆ, ಮುಂದೆಯೂ ಅಗತ್ಯ ಸಂದರ್ಭಗಳಲ್ಲಿ ಇದು ಇದ್ದೇ ಇರುತ್ತದೆ. ಆದರೆ, ನನ್ನದಲ್ಲದ ಹೇಳಿಕೆ ಇಲ್ಲವೇ ಅವರಿಗೆ ಬೇಕಾದ ರೀತಿಯಲ್ಲಿ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ನನ್ಮ ಹೆಸರು ದುರ್ಬಳಕೆ ಮಾಡಿಕೊಂಡಲ್ಲಿ ಸಹಿಸುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.
ಕಾರು ಅಡ್ಡಗಟ್ಟಿ 45.5 ಲಕ್ಷ ರೂ. ದರೋಡೆ, ಕದ್ದ ಹಣವನ್ನು ಟೈರ್​ನಲ್ಲಿ ಬಚ್ಚಿಟ್ಟಿದ್ದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
