ಭೋಪಾಲ್:ಹುಡುಗರೊಂದಿಗೆ ಚಾಟ್ ಮಾಡುತ್ತಾರೆ ಎನ್ನುವ ಒಂದೇ ಕಾರಣಕ್ಕೆ ಇಬ್ಬರು ಯುವತಿಯರಿಗೆ ಕೋಲಿನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿ ದೆ. ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಧರ್ ಜಿಲ್ಲೆಯ ಪಿಪಲ್ವ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದೆ. ಬುಡಕಟ್ಟು ಜನಾಂಗಕ್ಕೆ ಸೇರಿರುವ ಇಬ್ಬರು ಯುವತಿಯರು ಅವರ ಸಂಬಂಧಿಕ ಯುವಕರಿಗೆ ಮೆಸೇಜ್ ಮಾಡುತ್ತಿದ್ದರಂತೆ. ಮೆಸೇಜ್ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಅವರ ಯುವತಿಯರ ಸಂಬಂಧಿಗಳು ಅವರಿಗೆ ಥಳಿಸಿದ್ದಾರೆ. ಕೋಲಿನಿಂದ ಹೊಡೆದು, ಜುಟ್ಟು ಹಿಡಿದು ಎಳೆದಾಡಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಸುಮಾರು ಒಂದು ತಿಂಗಳ ಹಿಂದೆ ನಡೆದಿದ್ದ ಈ ಘಟನೆ ಪೊಲೀಸರ ಗಮನಕ್ಕೂ ಬಂದಿದ್ದು, ಕ್ರಮಕ್ಕೆ ಮುಂದಾದ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ವಿಡಿಯೋ ನೋಡಿ ಅದರಲ್ಲಿ ಆರೋಪಿಗಳನ್ನು ಗುರುತಿಸಿ ಕ್ರಮ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ಅನ್​ಲಾಕ್ ನೋಡಿ ರಿಲ್ಯಾಕ್ಸ್ ಆಗಬೇಡಿ, ಅಕ್ಟೋಬರ್​-ನವೆಂಬರ್​ನಲ್ಲಿ ಮತ್ತೆ ಕರೊನಾ ಪೀಕ್! ತಜ್ಞರ ಎಚ್ಚರಿಕೆ

ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + thirteen =
Remember me
