ಚೆನ್ನೈ:ತಮಿಳು ಕಿರುತೆರೆಯ ಖ್ಯಾತ ನಟಿ ಶ್ರುತಿ ಷಣ್ಮುಗ ಪ್ರಿಯಾ ಅವರ ಪತಿ ಅರವಿಂದ್​ ಶೇಖರ್​ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ ವರ್ಷದ ಮೇ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಈ ಜೋಡಿ ಕಾಲಿಟ್ಟಿತ್ತು.
ಆಗಸ್ಟ್​ 2ರಂದು ಸಂಜೆ ಅರವಿಂದ್​ ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ಧಾರೆ.
ಇದನ್ನೂ ಓದಿ:VIDEO| ನೆಟ್ಟಿಗರ ತಲೆಕೆಡಿಸಿದ ಟ್ರಾನ್ಸ್​ಪರೆಂಟ್​ ಮೀನು
ಶ್ರುತಿ ಮತ್ತು ಅರವಿಂದ್​ ದಂಪತಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದರು. ಬಾಡಿ ಬಿಲ್ಡಿರ್​ ಹಾಗೂ ಡಯಟೀಶಿಯನ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅರವಿಂದ್ ತೂಕ ಇಳಿಸುವ ಬಗ್ಗೆ​ ಆನ್​ಲೈನ್​ ಕ್ಲಾಸ್​ಗಳನ್ನು ತೆಗೆದುಕೊಳ್ಳುತ್ತಿದ್ದರು. ಅರವಿಂದ್​ ಹಾಗೂ ಶ್ರುತಿ ಜೋಡಿ ಕೊನೆಯದಾಗಿ ಮಾಡಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.
ಮೂಲತಃ ರಂಗಭೂಮಿ ಕಲಾವಿದೆಯಾಗಿರುವ ಶೃತಿ ಷಣ್ಮುಗ ಪ್ರಿಯಾ ನಾಥಸ್ವರಂ ಧಾರಾವಾಹಿ ಮೂಲಕ ಮನೆ ಮಾತಾಗಿದ್ದರು. ವಾಣಿ ರಾಣಿ, ಕಲ್ಯಾಣ ಪರಿಸು, ಪೊನ್ನುಂಚಲ್​, ಭಾರತಿ ಕಣ್ಣಮ್ಮ ಸೇರಿದಂತೆ ಹಲವು ಹಿಟ್​ ಧಾರಾವಾಹಿಗಳಲ್ಲಿ ನಟಿಸಿ ಸೈ ಎನ್ನಿಸಿಕೊಂಡಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one + ten =
Remember me
