ನವದೆಹಲಿ:ವರ್ಷಾಂತ್ಯದಲ್ಲಿ ನಡೆಯುವ ಪಂಚರಾಜ್ಯ ಚುನಾವಣೆ ದಿನಾಂಕ ಘೊಷಣೆಯಾಗುವದರೊಂದಿಗೆ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳ ವಿದಾಯಕ್ಕೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಐದು ರಾಜ್ಯಗಲ ಚುನಾವಣೆ ಘೋಷಣೆಯಾಗುವದರೊಂದಿಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿದಾಯದ ಘೋಷಣೆ ಸಹ ಆಗಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಬಲದಿಂದ ಜನರ ಬಳಿಗೆ ಹೋಗಲಿದೆ.
5 राज्यों के चुनावों की घोषणा के साथ भाजपा और उसके साथियों की विदाई का भी उद्घोष हो गया है।छत्तीसगढ़, मध्य प्रदेश, राजस्थान, तेलंगाना और मिजोरम में कांग्रेस पार्टी मज़बूती के साथ जनता के पास जाएगी।जन-कल्याण, सामाजिक न्याय और प्रगतिशील विकास ही कांग्रेस पार्टी की गारन्टी…
ಇದನ್ನೂ ಓದಿ:ಮೈಸೂರು ದಸರಾ 2023| ಉರ್ದು ಕವಿಗೋಷ್ಠಿಗೆ ಆಕ್ಷೇಪಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್; ಸರ್ಕಾರದ ವಿರುದ್ಧ ವಾಗ್ದಾಳಿ
ಸಾರ್ವಜನಿಕರ ಕಲ್ಯಾಣ, ಸಾಮಾಜಿಕ ನ್ಯಾಯ, ಪ್ರಗತಿಪರ ಅಭಿವೃದ್ಧಿ ಕಾಂಗ್ರೆಸ್​ ಪಕ್ ಜನರಿಗೆ ನೀಡುತ್ತಿರುವ ಭರವಸೆಗಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ರಾಷ್ಟ್ರೀಯ ಚುನಾವಣಾ ಆಯೋಗ ಮದ್ಯಪ್ರದೇಶ, ಛತ್ತೀಸ್​ಗಢ, ರಾಜಸ್ಥಾನ, ಮಿಜೋರಾಂ ಹಾಗೂ ತೆಲಂಗಾಣಕ್ಕೆ ಚುನಾವಣೆಯ ದಿನಾಂಕಗಳನ್ನು ಸೋಮವಾರ ಘೋಷಣೆ ಮಾಡಿದೆ. ನವೆಂಬರ್​ 7ರಿಂದ 30ನೇ ತಾರೀಖಿನವರೆಗೂ ವಿವಿಧ ದಿನಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್​ 3ರಂದು ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಗೂ ನಡೆಯುವ ಪಂಚರಾಜ್ಯ ಎಲೆಕ್ಷನ್​ ಅನ್ನು ಸೆಮಿಫೈನಲ್​ ಎಂದು ಬಿಂಬಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
