ನವದೆಹಲಿ:ರೈತರು ಬೆಳೆಯುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಒಕ್ಕೂಟವು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಲು ನಿರ್ಧರಿಸಿವೆ ಎಂದು ಭಾರತ ರಾಷ್ಟ್ರೀಯ ಕಿಸಾನ್​ ಯೂನಿಯನ್​ನ (BKU) ವಕ್ತಾರ ರಾಕೇಶ್​ ಟಿಕಾಯತ್​ ತಿಳಿಸಿದ್ದಾರೆ.
ಉತ್ತರಪ್ರದೇಶದ ನೋಯ್ಡಾದಲ್ಲಿ ಈ ಕುರಿತು ಮಾತನಾಡಿದ ಟಿಕಾಯತ್​, ಭಾರತ್​ ಬಂದ್​ಗೆ ರೈತ ಸಂಘಟನೆಗಳು, ವ್ಯಾಪಾರಿಗಳು ಮತ್ತು ಸಾರಿಗೆ ಸಂಸ್ಥೆಗಳು ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.
STORY | Farmer groups to observe 'Bharat Bandh' on Feb 16: Rakesh TikaitREAD:https://t.co/qRtOhkIzjopic.twitter.com/c247nVEFcK
ಇದನ್ನೂ ಓದಿ:ಭಾರತ ಜೋಡೋ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ: ಸಿಎಂ ಸಿದ್ದರಾಮಯ್ಯ
ರೈತರ ಬಹುದಿನದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾವು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿದ್ದೇವೆ. ಆ ದಿನ ರೈತರು ಸಹ ಹೊಲಗಳಿಗೆ ತೆರಳದೆ ಬಂದ್ ಆಚರಿಸಿದರೆ ದೇಶಕ್ಕೆ ದೊಡ್ಡ ಸಂದೇಶ ರವಾನೆ ಮಾಡಿದಂತಾಗುತ್ತದೆ. ವ್ಯಾಪಾರಿಗಳು ಸಹ ಆ ದಿನ ವ್ಯಾಪಾರ ಸ್ಥಗಿತಗೊಳಿಸಬೇಕು ಮತ್ತು ಗ್ರಾಹಕರು ಖರೀದಿ ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ರೈತರು ಬೆಳೆದಿರುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ, ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಿಂಚಣಿ ಸಿಗದಿರುವುದು ಸಹ ದೊಡ್ಡ ಸಮಸ್ಯೆಯಾಗಿದ್ದು ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್​ಗೆ ಕರೆ ನೀಡಲಾಗಿದೆ. ರೈತ ಸಂಘ ಸೇರಿದಂತೆ ಅನೇಕ ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ರಾಷ್ಟ್ರೀಯ ಕಿಸಾನ್​ ಯೂನಿಯನ್​ನ (BKU) ವಕ್ತಾರ ರಾಕೇಶ್​ ಟಿಕಾಯತ್​ ವಿನಂತಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
