ಹೊಸದಿಲ್ಲಿ:ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿರುವ ರೈತ ಸಂಘಗಳು ಇಂದು ಬೃಹತ್​ ಭಾರತ್ ಬಂದ್​ಗೆ ಕರೆ ನೀಡಿದ್ದು, ದೆಹಲಿಗೆ ತೆರಳದಂತೆ ಗಡಿಗಳಲ್ಲಿ ಹಾಕಿರುವ ನಿರ್ಬಂಧ ಹಾಗೂ ಸೆಕ್ಷನ್​ 144 ಜಾರಿಗೊಳಿಸಿರುವುದನ್ನು ಖಂಡಿಸಿ ಪ್ರತಿಭಟಿಸಲು ಮುಂದಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ (SKM) ಸೇರಿದಂತೆ ವಿವಿಧ ರೈತ ಸಂಘಗಳು ತಮ್ಮ ಬೇಡಿಕೆಗಳನ್ನು ಕೇಂದ್ರದ ಮುಂದೆ ಒತ್ತಾಯಿಸುವ ಸಲುವಾಗಿ ಫೆಬ್ರವರಿ 16ರಂದು ದೇಶವ್ಯಾಪಿ ಮುಷ್ಕರಕ್ಕೆ ಗ್ರಾಮೀಣ ಭಾರತ್ ಬಂದ್‌ಗೆ ಕರೆ ನೀಡಿವೆ. ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ನಲ್ಲಿ ಎಲ್ಲಾ ಸಮಾನ ಮನಸ್ಕ ರೈತ ಸಂಘಟನೆಗಳು ಒಗ್ಗೂಡಿ ಪಾಲ್ಗೊಳ್ಳುವಂತೆ ಎಸ್‌ಕೆಎಂ ವಿನಂತಿಸಿದೆ.
ಇದನ್ನೂ ಓದಿ:ರಾಜ್ಯ ಬಜೆಟ್ 2024: 15ನೇ ಬಾರಿಗೆ ಆಯವ್ಯಯವನ್ನು ಮಂಡಿಸಲಿರುವ ಸಿಎಂ, ನಿರೀಕ್ಷೆಗಳೇನು?
ಹರಿಯಾಣ, ಪಂಜಾಬ್‌ನಿಂದ ಮೆರವಣಿಗೆ ಹೊರಟು ದೆಹಲಿಯಿಂದ 200 ಕಿಲೋಮೀಟರ್ ದೂರದಲ್ಲಿರುವ ಅಂಬಾಲಾ ಬಳಿ ಹರಿಯಾಣ ಗಡಿಯಲ್ಲಿ ನೂರಾರು ರೈತರ ‘ದೆಹಲಿ ಚಲೋ’ ಪ್ರತಿಭಟನೆಯ ನಡುವೆ ಭಾರತ್ ಬಂದ್ ಕರೆ ಬಂದಿದೆ. ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಹರಿಯಾಣ ಭದ್ರತಾ ಪಡೆಗಳು ಅಶ್ರುವಾಯು ಕೂಡ ಪ್ರಯೋಗಿಸಲು ಮುಂದಾಗಿದೆ.
ಎಲ್ಲಾ ಸಮಾನ ಮನಸ್ಕ ರೈತ ಸಂಘಟನೆಗಳು ಮುಂದೆ ಬಂದು ಭಾರತ್ ಬಂದ್‌ನಲ್ಲಿ ಭಾಗವಹಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಕೇಳಿಕೊಂಡಿದ್ದು, ಇಂದು ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ:IND vs ENG​: ‘ಶುಭಮನ್​ ಟೆಸ್ಟ್​ ಆಟಗಾರನಲ್ಲ’! ಗಿಲ್​ ಬ್ಯಾಟಿಂಗ್ ವೈಫಲ್ಯಕ್ಕೆ ಕ್ರಿಕೆಟ್​ ಫ್ಯಾನ್ಸ್ ಕೊಟ್ಟ ಪ್ರತಿಕ್ರಿಯೆ ಹೀಗಿದೆ
ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಭಾರತದಾದ್ಯಂತ ಪ್ರಮುಖ ರಸ್ತೆಗಳಲ್ಲಿ ನಡೆಯುವ ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಪಂಜಾಬ್‌ನಲ್ಲಿ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ,(ಏಜೆನ್ಸೀಸ್).
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 14 =
Remember me
