ನವದೆಹಲಿ:ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ಹಂತ ತಲುಪಿದ್ದು, ಪತ್ರಕರ್ತನೋರ್ವನ ಮೇಲೆ ಗುಂಡು ಹಾರಿಸಲಾಗಿದೆ.
ಪಂಜಾಬ್​-ಹರಿಯಾಣದ ಶಂಭು ಗಡಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹಾರಿಸಿದ ಗುಂಡು ಆಜ್​ತಕ್ ಸುದ್ದಿ ಸಂಸ್ಥೆಯ ರಿಪೋರ್ಟರ್​ ಸತ್ಯೇಂದ್ರ ಚೌಹಾಣ್​ಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ಮೂಲಗಳ ಪ್ರಕಾರ ಅದು ರಬ್ಬರ್​ ಬುಲೆಟ್​ ಎಂದು ತಿಳಿದು ಬಂದಿದ್ದು, ಗಾಯಾಳುವಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಉಗ್ರರೂಪ ತಾಳಿದ್ದು ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನಲೆ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆಯನ್ನು ವಹಿಸಿದ್ದಾರೆ.
Reporter Satyendra Chauhan was doing live reporting on Aaj Tak and during this he said that he has been shot.Later it was told that it was a rubber bullet, he was bleeding,He is fine now.Not much information has been received yet.#FarmersProtest2024pic.twitter.com/Karvl2VQnG
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 2 =
Remember me
