ನವದೆಹಲಿ:ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆಯಿಂದಾಗಿ ದೆಹಲಿಯ 18 ಮಂದಿ ಪೊಲೀಸರು ಗಾಯಗೊಂಡು ಲೋಕನಾಯಕ್​ ಜಯಪ್ರಕಾಶ್ ನಾರಾಯಣ ಆಸ್ಪತ್ರೆ (ಎಲ್​ಎನ್​​ಜೆಪಿ) ಗೆ ದಾಖಲಾಗಿದ್ದು, ಓರ್ವ ಸಿಬ್ಬಂದಿಯ ಪರಿಸ್ಥಿತಿ ಗಂಭೀರವಾಗಿದೆ.​ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕೆಲ ತಿಂಗಳಿಂದ ದೆಹಲಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದು, ಇಂದಿನ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್​ ರ‍್ಯಾಲಿಯನ್ನು ರೈತರು ಹಮ್ಮಿಕೊಂಡಿದ್ದರು. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ರೈತರು ಮತ್ತು ಪೊಲೀಸರ ನಡುವಿನ ತಿಕ್ಕಾಟದಲ್ಲಿ ಪೊಲೀಸ್​ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿರಿ:ಆ ಒಂದು ವಾಟ್ಸ್​ಆ್ಯಪ್​ ಮೆಸೇಜ್​ಗೆ ಆತುರ ನಿರ್ಧಾರ: ಪ್ರೇಮಿಗಳಿಬ್ಬರ ದುರಂತ ಅಂತ್ಯ!
ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹಸಚಿವಾಲಯ ಹೆಚ್ಚುವರಿ ರಕ್ಷಣಾ ಪಡೆಗಳನ್ನು ಪರಿಸ್ಥಿತಿ ನಿಯಂತ್ರಿಸಲು ನಿಯೋಜಿಸಿದೆ. ಮಂಗಳವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್​​ ಷಾ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.
ಪ್ಯಾರಾಮಿಲಿಟರಿ ಪಡೆಗಳ ಹೆಚ್ಚುವರಿ ಕಂಪನಿಗಳು ದೆಹಲಿಯಲ್ಲಿ ನಿಯೋಜಿಸುವ ಸಾಧ್ಯತೆ ಇದೆ. ಸುಮಾರು 15 ಕ್ಕೂ ಹೆಚ್ಚು ಕಂಪನಿಗಳನ್ನು ನಿನ್ನೆಯೇ ಕಳುಹಿಸಲಾಗಿದ್ದು, ಇಂದು ಹೆಚ್ಚುವರಿಯಾಗಿ 5 ಕಂಪನಿಗಳು ನಿಯೋಜನೆಗೊಳ್ಳಲಿವೆ ಎಂದು ತಿಳಿದುಬಂದಿದೆ.(ಏಜೆನ್ಸೀಸ್​)
ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಕೆಂಪುಕೋಟೆಗೆ ಮುತ್ತಿಗೆ, ಅನ್ಯ ಧ್ವಜಾರೋಹಣ

VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!

ಮೈ ಕೊರೆಯುವ ಚಳಿಯ ನಡುವೆಯೇ 16 ಸಾವಿರ ಅಡಿಯೇರಿ ಧ್ವಜ ಹಾರಿಸಿದ ವೀರ ಯೋಧರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eleven =
Remember me
