ನವದೆಹಲಿ:ಕನಿಷ್ಠ ಬೆಂಬಲ ಸೇರಿದಂತೆ ವಿವಿಧ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು (ಫೆಬ್ರವರಿ 17) ಐದನೇ ದಿನ ತಲುಪಿದ್ದು, ಶಂಭು ಗಡಿಯ ಕಡೆ ಸಾಗಲು ಯತ್ನಿಸಿದ ರೈತರನ್ನು ಚದುರಿಸಲು ಹರಿಯಾಣ ಪೊಲೀಸರು ಶುಕ್ರವಾರ ಅಶ್ರುವಾಯು ಪ್ರಯೋಗಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಮತ್ತು ಇತರ ಕೆಲವು ಬೇಡಿಕೆಗಳ ಈಡೇರಿಕೆಗೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಿಸಾನ್ ಮಜ್ದೂರ್ ಮೋರ್ಚಾ ಕರೆ ನೀಡಿರುವ ‘ದೆಹಲಿ ಚಲೋ’ ಪ್ರತಿಭಟನೆಯು ಐದನೇ ದಿನಕ್ಕೆ ಕಾಲಿರಿಸಿತ್ತು. ಕೇಂದ್ರ ಸರ್ಕಾರದ ಜೊತೆ ಗುರುವಾರ ನಡೆದ ಮಾತುಕತೆಯು ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಎರಡೂ ಕಡೆಯವರು ಭಾನುವಾರ ಮತ್ತೆ ಸಭೆ ಸೇರಲಿದ್ದಾರೆ ಎಂದು ತಿಳಿದು ಬರಲಿದೆ.
ಇದನ್ನೂ ಓದಿ:ಅಂಬಾನಿ ಒಡೆತನದ ಆಂಟಿಲಿಯಾದ ಒಳಾಂಗಣ ವಿನ್ಯಾಸಗಾರ್ತಿ ಯಾರು ಗೊತ್ತಾ; ಖ್ಯಾತ ನಟನ ಪತ್ನಿ ಈಕೆ
ಭಾನುವಾರ ನಾಲ್ಕನೇ ಸುತ್ತಿನ ಸಭೆ ನಡೆಯಲಿದ್ದು, ಈ ಹಿಂದೆ ಫೆಬ್ರುವರಿ 8, 12 ಮತ್ತು 15ರಂದು ನಡೆದಿದ್ದ ಸಭೆಯಲ್ಲಿ ಒಮ್ಮತ ಮೂಡಿರಲಿಲ್ಲ. ದೆಹಲಿ ಕಡೆ ಸಾಗಲು ಯತ್ನಿಸುತ್ತಿರುವ ರೈತರನ್ನು ಪಂಜಾಬ್–ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. ಮಂಗಳವಾರದಿಂದಲೂ ರೈತರು ಈ ಎರಡು ಗಡಿಗಳಲ್ಲಿ ಬೀಡು ಬಿಟ್ಟಿದ್ದಾರೆ.
ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಮಾತ್ರವೇ ಅಲ್ಲದೆ, ಸ್ವಾಮಿನಾಥನ್ ಆಯೋಗದ ವರದಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ. ರೈತರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ ನೀಡಬೇಕು, ಕೃಷಿ ಸಾಲ ಮನ್ನಾ ಮಾಡಬೇಕು, ವಿದ್ಯುತ್ ಶುಲ್ಕ ಸೇರಿದಂತೆ ವಿವಿಧ ಬೇಡಿಕೆಗಳನ್ನೂ ರೈತರು ಸರ್ಕಾರದ ಮುಂದೆ ಇರಿಸಿ ಪ್ರತಿಭಟಿಸುತ್ತಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 8 =
Remember me
