ನವದೆಹಲಿ:ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನು ವಿರೋಧಿಸಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರರಾಜಧಾನಿಗೆ ಮುತ್ತಿಗೆ ಹಾಕುವ ಪ್ರಯತ್ನದಲ್ಲಿದ್ದಾರೆ. ಈ ಪ್ರತಿಭಟನೆ ಇಂದು 5ನೇ ದಿನಕ್ಕೆ ಕಾಲಿರಿಸಿದ್ದು, ರಾಜಧಾನಿ ಪ್ರವೇಶದ ಐದು ಪ್ರವೇಶದ್ವಾರಗಳನ್ನು ಬಂದ್ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಬುರಾರಿ ಗ್ರೌಂಡ್​ಗೆ ಹೊರಟು ಹೋದರೆ ಮಾತುಕತೆಗೆ ಆಹ್ವಾನಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದರೂ, ಅದನ್ನು ತಿರಸ್ಕರಿಸಿರುವ ಪ್ರತಿಭಟನಾಕಾರರು ಷರತ್ತುಬದ್ಧ ಮಾತುಕತೆ ನಮಗೆ ಸಮ್ಮತವಲ್ಲ ಎಂದು ಹೇಳಿಕೊಂಡಿದ್ದಾರೆ. ಪ್ರತಿಭಟನಾಕಾರರು ಶನಿವಾರ ಬುರಾರಿಯ ನಿರಂಕಾರಿ ಸಮಾಗಮ ಗ್ರೌಂಡ್ ತಲುಪಿದ್ದು, ಅಲ್ಲೇ ಪ್ರತಿಭಟನೆ ಮುಂದುವರಿಸಿದ್ದಾರೆ.ಸರ್ಕಾರ ನಿಗದಿಪಡಿಸಿದ ಸ್ಥಳದಲ್ಲಿ ಪ್ರತಿಭಟನಾಕಾರರು ಸೇರಿದರೆ ಕೂಡಲೇ ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮನವಿ ಮಾಡಿದ್ದರು.
ಇದನ್ನೂ ಓದಿ:ಕಾಲೇಜ್​ವರೆಗೂ ಹುಡುಗಿಯಾಗೇ ಇದ್ದೆ… ಆದ್ರೆ… ರಹಸ್ಯ ಬಿಚ್ಚಿಟ್ಟ ಗಾಯಕಿ…
ಸರ್ಕಾರ ಸೂಚಿಸಿರುವ ಬುರಾರಿ ಗ್ರೌಂಡ್ ಓಪನ್ ಜೈಲ್ ಆಗಿದ್ದು, ಅಲ್ಲಿ ಹೋಗಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಹೇಳಿಕೊಂಡಿದ್ದಾರೆ. 30ಕ್ಕೂ ಹೆಚ್ಚು ರೈತಸಂಘಟನೆಗಳವರೊಂದಿಗೆ ಅಮಿತ್ ಷಾ ಮಾತುಕತೆ ಡಿಸೆಂಬರ್ 3ಕ್ಕೆ ನಿಗದಿಯಾಗಿದೆ. ಕೇಂದ್ರ ಗೃಹ ಖಾತೆ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು 32 ರೈತ ಸಂಘಟನೆಗಳಿಗೆ ಶನಿವಾರ ಪತ್ರ ಬರೆದಿದ್ದು, ಚಳಿ ವಾತಾವರಣ ಮತ್ತು ಕೋವಿಡ್ ಕಾರಣಕ್ಕೆ ಎಲ್ಲರೂ ಬುರಾರಿ ಗ್ರೌಂಡ್​ಗೆ ಬರಬೇಕು. ಅಲ್ಲಿ ಎಲ್ಲ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದ್ದರು. (ಏಜೆನ್ಸೀಸ್)
ಶಿವಸೇನೆ ಸೇರಲಿದ್ದಾರೆ ಊರ್ಮಿಳಾ- ಎಂಎಲ್​ಸಿ ನಾಮನಿರ್ದೇಶನಕ್ಕೆ ಹೆಸರು ರವಾನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 3 =
Remember me
