ನವದೆಹಲಿ:ಕೃಷಿಗೆ ಸಂಬಂಧಿಸಿದ 3 ಹೊಸ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಶಮನಗೊಳಿಸಲು 35 ರೈತ ಸಂಘಟನೆಗಳ ಮುಖಂಡರೊಂದಿಗೆ ಕೇಂದ್ರ ಸರ್ಕಾರ ಮಂಗಳವಾರ ನಡೆಸಿದ ಮೂರನೇ ಸಭೆಯೂ ಫಲಪ್ರದವಾಗಿಲ್ಲ. ಹೀಗಾಗಿ ರೈತರು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ.
ರೈತರ ಸಮಸ್ಯೆಗಳನ್ನು ರ್ಚಚಿಸಲು ಉನ್ನತ ಮಟ್ಟದ ಐವರು ಸದಸ್ಯರ ಸಮಿತಿಯನ್ನು ರಚಿಸುತ್ತೇವೆ. ಈ ಸಮಿತಿ ಸದಸ್ಯರ ಹೆಸರನ್ನು ರೈತರೇ ಸೂಚಿಸಲಿ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಇದಕ್ಕೆ ಸಮ್ಮತಿಸದ ರೈತ ಮುಖಂಡರು, ಹೊಸ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ಪಟ್ಟನ್ನು ಸಡಿಲಿಸಲಿಲ್ಲ. ಹೀಗಾಗಿ ಡಿ. 3ರಂದು ಮತ್ತೊಂದು ಸಭೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹಾಗೂ ವಾಣಿಜ್ಯ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ನೇತೃತ್ವದಲ್ಲಿ ಎರಡು ತಾಸಿಗೂ ಅಧಿಕ ಸಮಯದವರೆಗೆ ಸಭೆ ನಡೆಯಿತು. ಸಭೆಗೂ ಮೊದಲು ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಷಾ, ನರೇಂದ್ರ ಸಿಂಗ್ ತೋಮರ್ ಹಾಗೂ ಪಿಯೂಷ್ ಗೋಯಲ್ ಅವರು ಜೆ.ಪಿ.ನಡ್ಡಾ ನಿವಾಸದಲ್ಲಿ ಮಾತುಕತೆ ನಡೆಸಿದ್ದರು.
ಗಡಿಯಲ್ಲಿ ಹೆಚ್ಚುತ್ತಿರುವ ರೈತರುಪ್ರತಿಭಟನೆಗೆ ಬರುತ್ತಿರುವ ರೈತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಇನ್ನೂ ಹತ್ತಾರು ಸಾವಿರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಪರಿಸ್ಥಿತಿ ನಿಭಾಯಿಸಲು ಭದ್ರತಾ ಪಡೆಗಳು ಹಾಗೂ ಪೊಲೀಸರಿಗೆ ಹಲವು ಸಲಹೆ, ಸೂಚನೆಗಳನ್ನು ನೀಡ ಲಾಗಿದೆ ಎಂದು ತಿಳಿದುಬಂದಿದೆ. ದೆಹಲಿ ಗಡಿಗಳಲ್ಲಿ ಕಳೆದ ಶುಕ್ರವಾರದ ಘರ್ಷಣೆ ನಂತರ ಈವರೆಗೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.
ಹರಿಯಾಣದ ಶಾಸಕ ಸೋಂಬೀರ್ ಸಾಂಗ್ವಾನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಜತೆಗೆ ರಾಜ್ಯ ಜಾನುವಾರು ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಪಾಲುದಾರ ಪಕ್ಷ ಜೆಜೆಪಿ ಕೂಡ ರೈತರಿಗೆ ಬೆಂಬಲ ವ್ಯಕ್ತಪಡಿಸಿದೆ.
ರೈತರು ನಡೆಸುತ್ತಿರುವ ಚಳವಳಿಯನ್ನು ಬಳಸಿಕೊಳ್ಳಲು ಪಾಕಿಸ್ತಾನದಲ್ಲಿರುವ ಖಲಿಸ್ತಾನಿ ಗುಂಪುಗಳು ಪ್ರಯತ್ನಿಸುತ್ತಿವೆ ಎಂದು ಗುಪ್ತಚರ ವರದಿ ಎಚ್ಚರಿಕೆ ನೀಡಿದೆ. ಗಡಿ ರಾಜ್ಯದಲ್ಲಿ ರೈತ ಚಳವಳಿಯ ದುರುಪಯೋಗಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಕೃಷಿಗೆ ಸಂಬಂಧಿತ ಮೂರು ಹೊಸ ಕಾಯ್ದೆಗಳಲ್ಲಿ ಆಕ್ಷೇಪಗಳಿರುವ ಅಂಶಗಳನ್ನು ಬುಧವಾರ ದೊಳಗೆ ಪಟ್ಟಿ ಮಾಡಿ ಕೊಡಿ ಎಂದು ರೈತ ಸಂಘಟನೆಗಳಿಗೆ ತಿಳಿಸಿದ್ದೇವೆ.| ನರೇಂದ್ರ ಸಿಂಗ್ ತೋಮರ್ಕೇಂದ್ರ ಕೃಷಿ ಸಚಿವ
ಸಭೆಯಲ್ಲಿ ಯಾವುದೇ ಒಮ್ಮತಕ್ಕೆ ಬರಲಾಗಿಲ್ಲ. ಕೇಂದ್ರ ಡಿ.3ರಂದು ಮತ್ತೊಂದು ಸಭೆಗೆ ಕರೆ ನೀಡಿದೆ.| ಜೋಗಿಂದರ್ ಸಿಂಗ್ಭಾರತ್ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಹನ್) ಅಧ್ಯಕ್ಷ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆಗೆ ಭಾರತ ಕಿಡಿನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೊ ಸಮರ್ಥಿಸಿದ್ದು, ಇದಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ರೈತರ ಪ್ರತಿಭಟನೆಯ ಬಗ್ಗೆ ಕಳವಳ ಉಂಟಾಗಿದ್ದು, ನಮ್ಮ ಸ್ನೇಹಿತರ ಬಗ್ಗೆ ತುಂಬಾ ಚಿಂತಿತರಾಗಿದ್ದೇವೆ. ಶಾಂತಿಯುತ ಪ್ರತಿಭಟನೆಯನ್ನು ಕೆನಡಾ ಬೆಂಬಲಿಸುತ್ತದೆ ಎಂದು ಕೆನಡಾ ಪ್ರಧಾನಿ ಟ್ರುಡೊ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯ, ಕೆನಡಾ ಪ್ರಧಾನಿ ಹೇಳಿಕೆ ಅನಪೇಕ್ಷಿತ ಮತ್ತು ಅನಗತ್ಯ ಎಂದಿದೆ. ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರದಲ್ಲಿ ಮೂಗುತೂರಿಸುವುದು ಸರಿಯಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ಹೇಲಿದ್ದಾರೆ. ಖಲಿಸ್ತಾನ ಹೋರಾಟದ ನಾಯಕರಿಗೆ ಜಸ್ಟಿನ್ ಟ್ರುಡೊ ಬೆಂಬಲ ನೀಡಿದ್ದ ಹಿನ್ನೆಲೆಯಲ್ಲಿ ಅವರು 2018ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಅವರ ಸ್ವಾಗತದಲ್ಲಿ ಶಿಷ್ಟಾಚಾರವನ್ನು ಬದಿಗೆ ಸರಿಸಲಾಯಿತು. ಯಾವುದೇ ದೇಶದ ಪ್ರಧಾನಿ ಅಥವಾ ಅಧ್ಯಕ್ಷರು ಭೇಟಿ ನೀಡಿದ್ದ ವೇಳೆಯಲ್ಲಿ ಪ್ರಧಾನಿ ಅಥವಾ ಕೇಂದ್ರದ ಉನ್ನತ ನಾಯಕರು ಅವರನ್ನು ಸ್ವಾಗತಿಸುತ್ತಾರೆ. ಆದರೆ ಟ್ರುಡೊ ಭೇಟಿ ವೇಳೆ ರಾಜ್ಯ ಖಾತೆ ಸಚಿವರೊಬ್ಬರು ಮಾತ್ರ ಅವರನ್ನು ಸ್ವಾಗತಿಸಿದ್ದರು ಹಾಗೂ ಪ್ರಧಾನಿ ನರೇಂದ್ರ ಮೋದಿ 4 ದಿನಗಳ ಬಳಿಕ ಅವರನ್ನು ಭೇಟಿ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
