ನವದೆಹಲಿ:ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಕಾನೂನುಗಳ ಜಾರಿಗೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪೊಲೀಸರ ಜತೆ ಉಂಟಾದ ಸಂಘರ್ಷದಲ್ಲಿ ರೈತರೊಬ್ಬರು ಮೃತಪಟ್ಟಿದ್ದು, ಸಂತಾಪ ದ ಭಾಗವಾಗಿ ಮುಂದಿನ ಎರಡು ದಿನ ಪ್ರತಿಭಟನೆಯನ್ನು ಸ್ಥಗಿತಗೊಳಿಸುವುದಾಗಿ ರೈತ ಸಂಘಟನೆಗಳ ನಾಯಕರು ತಿಳಿಸಿದ್ದಾರೆ.
ರೈತರ ಬೇಡಿಕೆ ಈಡೇರಿಸುವಂತೆ ಪಂಜಾಬ್‌ನ ಗಡಿ ಪ್ರದೇಶಗಳಾದ ಶಂಭು ಹಾಗೂ ಖನೌರಿಯಲ್ಲಿ ಜಮಾಯಿಸಿರುವ ರೈತರ ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಬುಧವಾರ ಅಶ್ರುವಾಯು ಪ್ರಯೋಗಿಸಿದ್ದಾರೆ.
ಇದನ್ನೂ ಓದಿ:ಹಿಂದೂಗಳ ಬಗ್ಗೆ ಅವಹೇಳನಕಾರಿ ಪೋಸ್ಟ್​; ಕ್ಷಮೆ ಕೇಳಿದ 12th ಫೇಲ್​ ನಾಯಕ ನಟ
ಪಂಜಾಬ್‌ನ ಗಡಿ ಪ್ರದೇಶಗಳಾದ ಶಂಭು ಹಾಗೂ ಖನೌರಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಪೊಲೀಸರು ಡ್ರೋನ್​ಗಳ ಮೂಲಕ ಅಶ್ರುವಾಯು ಪ್ರಯೋಗಿಸಿದರು. ಈ ವೇಳೆ ಆವರಿಸಿದ ದಟ್ಟ ಹೊಗೆಯಿಂದ ಪಾರಾಗಲು ರೈತರು ಮುಖಗವಸು ಹಾಗೂ ಕನ್ನಡಕಗಳನ್ನು ತೊಟ್ಟು ಸುರಕ್ಷಿತ ಸ್ಥಳಗಳತ್ತ ಓಡಲು ಶುರು ಮಾಡಿದ್ದಾರೆ.
ಈ ವೇಳೆ ಅಖಿಲ ಭಾರತ ಕಿಸಾನ್‌ ಸಭಾದ (AIKS) ಸಂಘಟನೆಯ ಮುಖಂಡರೊಬ್ಬರು ಗುಂಡು ತಗುಲಿ ಮೃತಪಟ್ಟಿದ್ದಾರೆ. ಮೃತರನ್ನು ಬಟಿಂಡಾ ಮೂಲದ ಶುಭಕರಣ್ ಸಿಂಗ್ (21) ಎಂದು ಗುರುತಿಸಲಾಗಿದ್ದು, ಇವರ ಸಾವಿಗೆ ಪೊಲೀಸರೇ ಕಾರಣ ಎಂದು ರೈತ ಸಂಘಟನೆಗಳು ಆರೋಪಿಸಿವೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × four =
Remember me
