ನವದೆಹಲಿ:ಖ್ಯಾತ ಫ್ಯಾಷನ್ ಪ್ರಭಾವಿ ಸುರಭಿ ಜೈನ್ (30) ನಿಧನರಾಗಿದ್ದಾರೆ. ಇನ್‌ಸ್ಟಾಗ್ರಾಮ್‌ ನಲ್ಲಿ ಅನೇಕ ಫಾಲೋವರ್ಸ್‌ಗಳನ್ನು ಹೊಂದಿರುವ ಸುರಭಿ ದೀರ್ಘಕಾಲದಿಂದ ಅಂಡಾಶಯ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ತಿಂಗಳ ಹಿಂದೆ ಸುರಭಿ ಕ್ಯಾನ್ಸರ್‌ನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರವನ್ನು ಸಾಮಾಜೆಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದನ್ನೂ ಓದಿ:‘ಇದು ಡ್ರೋನ್ ಅಲ್ಲ, ಮಕ್ಕಳ ಆಟಿಕೆ’: ಇಸ್ರೇಲ್ ವೈಮಾನಿಕ ದಾಳಿಗೆ ಇರಾನ್ ವ್ಯಂಗ್ಯ!
“ನನ್ನ ಆರೋಗ್ಯದ ಬಗ್ಗೆ ನಿಮಗೆ ತಿಳಿಸಲು ಸಾಧ್ಯವಿಲ್ಲ. ಆರೋಗ್ಯ ಸ್ಥಿತಿ ತುಂಬಾ ಕೆಟ್ಟದಾಗಿದೆ. ಎಲ್ಲರೂ ಆರೋಗ್ಯದ ಬಗ್ಗೆ ಕೇಳುತ್ತಾರೆ. ಆದರೆ ಹೆಚ್ಚೇನೂ ಹೇಳಬೇಕಾಗಿಲ್ಲ. ಕಳೆದ ಎರಡು ತಿಂಗಳಿಂದ ಆಸ್ಪತ್ರೆಯಲ್ಲಿಯೇ ಇದ್ದೇನೆ. ಚಿಕಿತ್ಸೆ ನಡೆಯುತ್ತಿದೆ. ಈ ಕಷ್ಟಗಳು ಆದಷ್ಟು ಬೇಗ ಮುಗಿಯಲಿ ಎಂದು ನಾನು ಬಯಸುತ್ತೇನೆ” ಎಂದು ಸುರಭಿ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದರು.
ಸುರಭಿ ಸಾವಿನ ಬಗ್ಗೆ ಕುಟುಂಬಸ್ಥರೇ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ. ಆಕೆ ಏಪ್ರಿಲ್ 18 ರಂದು ನಿಧನರಾದರು. ಸುರಭಿಯ ಅಂತ್ಯಕ್ರಿಯೆಯನ್ನು ಏಪ್ರಿಲ್ 19 ರಂದು ಗಾಜಿಯಾಬಾದ್‌ನಲ್ಲಿ ನಡೆಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಸುರಭಿಗೆ 27ನೇ ವಯಸ್ಸಿನಲ್ಲಿ ಕ್ಯಾನ್ಸರ್​ ಇರುವುದು ಪತ್ತೆಯಾಗಿತ್ತು. ನಂತರ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತನಗೆ 149 ಹೊಲಿಗೆ ಹಾಕಲಾಗಿದ್ದು, ಶಸ್ತ್ರಚಿಕಿತ್ಸೆಯ ನಂತರ ತುಂಬಾ ನೋವಾಗಿದೆ ಎಂದು ಸುರಭಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು.
‘ಛಾನ್ಸ್​ ಕೊಟ್ರೆ ನನಗೇನು ಕೊಡ್ತೀಯಾ?’…ಹೀಗೆಂದ ಟಾಪ್ ಹೀರೋಗೆ ನಟಿ ಹೇಳಿದ್ದೇನು? ಕಡೆಗೆ ‘ಛಾನ್ಸ್​’ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
