ನವದೆಹಲಿ:ಎಂಬಿಬಿಎಸ್​ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗ ಇಬ್ಬರೂ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸಿರುವ ಪ್ರಕರಣವೂ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ನವದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ನೆಲೆಸಿರುವ ಖಾಸಗಿ ಬ್ಯಾಂಕ್ ಉದ್ಯೋಗಿ ಮೊಹಮ್ಮದ್ ಅಖ್ಲಾಕ್​ (30) ಹಾಗೂ ಆತನ ತಂದೆ ಮೊಹಮ್ಮದ್ ಮೊಯಿನ್ (52) ಬಂಧಿತರು. ಇವರಿಬ್ಬರೂ ಗ್ರೇಟರ್​ ನೋಯ್ಡಾ ಪ್ರದೇಶದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ 23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.
ಮೊಹಮ್ಮದ್ ಅಖ್ಲಾಕ್​ ಸೋಷಿಯಲ್ ಮೀಡಿಯಾದಲ್ಲಿ ಆದಿತ್ಯ ಶರ್ಮಾ ಎಂಬ ಹೆಸರಿನಲ್ಲಿ ಪರಿಚಯವಾಗಿದ್ದು ಬಳಿಕ ಅದು ಸ್ನೇಹಕ್ಕೆ ತಿರುಗಿ ದೈಹಿಕ ಸಂಪರ್ಕದವರೆಗೂ ಹೋಗಿತ್ತು ಎಂದ ಯುವತಿ, ಬಳಿಕ ತಂದೆ-ಮಗ ಇಬ್ಬರೂ ಸೇರಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ತನ್ನ ನಿಜವಾದ ಹೆಸರನ್ನು ಮುಚ್ಚಿಟ್ಟಿದ್ದಲ್ಲದೆ, ತಾನು ವಿವಾಹಿತನಾಗಿದ್ದು ಇಬ್ಬರು ಮಕ್ಕಳ ತಂದೆ ಎಂಬ ವಿಚಾರವನ್ನೂ ಮರೆಮಾಚಿಟ್ಟಿದ್ದ. ಈ ಬಗ್ಗೆ ಗೊತ್ತಾಗಿ ತಕರಾರು ತೆಗೆದಾಗ ಅಖ್ಲಾಕ್​ ತಂದೆ, ನೀನು ಇಸ್ಲಾಂ ಧರ್ಮಕ್ಕೆ ಮತಾಂತರವಾಗು, ಆಗ ನನ್ನ ಮಗ ನಿನ್ನನ್ನು ಎರಡನೇ ಮದುವೆಯಾಗಬಹುದು ಎಂದು ಹೇಳಿದ್ದಾಗಿ ಯುವತಿ ತಿಳಿಸಿದ್ದಾಳೆ. ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೇನು ನಿಮ್ಮ ಕೆಲಸದ ಅವಧಿ ಮುಗಿಯುತ್ತೆ, ಮನೆಗೆ ಹೊರಡಿ: ಈ ಕಂಪನಿಯಲ್ಲಿ ಉದ್ಯೋಗಿಗಳಿಗೆ ಹೀಗೊಂದು ಎಚ್ಚರಿಕೆ!

ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತ ವಯಸ್ಕಳ ಮುಖಕ್ಕೇ ಆ್ಯಸಿಡ್ ಎರಚಿದ!; ಆರೋಪಿ ಪರಾರಿ

ಕ್ರಿಕೆಟ್​ ವೇಳೆ ಕಿರಿಕ್​, ಚಾಕು ಇರಿತಕ್ಕೆ ಇಬ್ಬರ ಸಾವು: ಎರಡೂ ಊರುಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

ತಮಿಳುನಾಡು ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಇಲಾಖೆಯವರ ಮಧ್ಯೆ ಗುಂಡಿನ ಚಕಮಕಿ; ಒಬ್ಬ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 11 =
Remember me
