ನವದೆಹಲಿ:ಹಣ ಕೇಳಿದಾಗ ಕೊಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾನೆ. ಮಗನಿಂದ ಇರಿತಕ್ಕೊಳಗಾಗಿ ತಂದೆ ಸಾವಿಗೀಡಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಫತೇಪುರ್​ನ ಬೇರಿ ಪ್ರದೇಶದ ಮನೋಹರ್ ಲಾಲ್​ ಮೃತಪಟ್ಟ ವ್ಯಕ್ತಿ. ಈತನ ಪುತ್ರ 29 ವರ್ಷದ ಬಲ್​ವಾನ್​ ಕೊಲೆ ಆರೋಪಿ. ಭಾನುವಾರ ಭೀಮ್​ ಬಸ್ತಿ ಎಂಬಲ್ಲಿ ಈ ಕೃತ್ಯ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೆ ನಂಬರ್​ ಪ್ಲೇಟ್ ಮರೆಮಾಚಿ ಪರಾರಿ!; ದಂಡ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪ್ರಚಂಡರು..
ಹಣಕಾಸಿನ ವಿಚಾರವೊಂದಕ್ಕೆ ಸಂಬಂಧಿಸಿ ತಂದೆ ಹಾಗೂ ಮಗನ ನಡುವೆ ವಾಗ್ವಾದ ಉಂಟಾಗಿತ್ತು. ಮಗ ಹಣ ಕೇಳಿದರೂ ತಂದೆ ಕೊಡಲು ನಿರಾಕರಿಸಿದ್ದರಿಂದ ಸಿಟ್ಟಾಗಿ ಹರಿತವಾದ ಆಯುಧದಿಂದ ಪದೇಪದೆ ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ತಂದೆಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತಾದರೂ ಸಾವಿಗೀಡಾಗಿದ್ದಾರೆ. (ಏಜೆನ್ಸೀಸ್)
ಕರೊನಾ ರಾತ್ರಿ ಬರುತ್ತೆ, ಹಗಲು ಬರಲ್ವಾ?

ಅಭಿಮಾನಿಗಳು ದೇವರಾದ ಕಥೆ: ಇಂದು ಡಾ.ರಾಜ್​ಕುಮಾರ್ ಅವರ 15ನೇ ಪುಣ್ಯಸ್ಮರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 2 =
Remember me
