ಲಖನೌ:ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ರೋಗಿಗೆ ಖಾಸಗಿ ಆಸ್ಪತ್ರೆಯ ಕಾಂಪೌಂಡರ್​ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರಪ್ರದೇಶದ ಮುಜಾಫರ್​ನಗರ ಜಿಲ್ಲೆಯಲ್ಲಿ ನಡೆದಿದೆ.
ಕಿರುಕುಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಸಂಬಂಧ ಯುವತಿ ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಶೋಯೆಬ್​​ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಚಿಪ್ಸ್​-ಬಿಸ್ಕೆಟ್ ಕಳ್ಳತನ ಶಂಕೆ; ಅಪ್ರಾಪ್ತರನ್ನು ಅಮಾನುಷವಾಗಿ ಥಳಿಸಿದ ಗುಂಪು
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಂಧಿತ ಆರೋಪಿ ರಾತ್ರಿ ವೇಳೆ ರೋಗಿಗಳು ಮಲಗಿರುವ ವೇಳೆ ಕೃತ್ಯ ಎಸಗುತ್ತಿದ್ದುದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತನ ವಿರುದ್ಧ ಚಾರ್ಜ್​ಶೀಟ್​ ಸಿದ್ದಪಡಿಸಿ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಮಾಲೀಕ, ಆರೋಪಿ ಶೋಯೆಬ್​ನನ್ನು ಎರಡು ತಿಂಗಳ ಹಿಂದೆ ಕೆಲಸಕ್ಕೆ ಸೇರಿಕೊಂಡಿದ್ದ. ಮೊದಲಿಗೆ ಯುವತಿಯ ಕುಟುಂಬಸ್ಥರು ದೌರ್ಜನ್ಯ ಎಸಗಿರುವ ಬಗ್ಗೆ ಆಡಳಿತ ಮಂಡಳಿಗೆ ತಿಳಿಸಿದ್ದರು. ಕೂಡಲೇ ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆತ ಕೃತ್ಯ ಎಸಗಿರುವುದು ಕಂಡು ಬಂದಿತ್ತು. ಕೂಡಲೇ ಆತನನ್ನು ಕೆಲಸದಿಂದ ವಜಾ ಮಾಡಲಾಗಿದ್ದು, ಪೊಲೀಸ್​ ಅಧಿಕಾರಿಗಳು ಆರೋಪಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಸ್ಪತ್ರೆಯ ಮಾಲೀಕ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 18 =
Remember me
