ಕೊಟ್ಟಾಯಂ:ಮಹಿಳಾ ವೈದ್ಯೆಗೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.ರೋಗಿಯನ್ನು ಬಿಜು ಪಿ ಜಾನ್ ಎಂದು ಗುರುತಿಸಲಾಗಿದ್ದು, ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳಾ ಸ್ನಾತಕೋತ್ತರವನ್ನು ಅಭ್ಯಸಿಸುತ್ತಿರುವ ವೈದ್ಯೆಯನ್ನು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾನೆ.ಇದನ್ನೂ ಓದಿ:ಸುಪ್ರೀಂಕೋರ್ಟ್​ನಲ್ಲಿ ನನ್ನ ಪರ ವಾದಿಸಲು ಕಪಿಲ್ ಸಿಬಲ್​ಗೆ ಮನವಿ: ಹನಿಟ್ರ್ಯಾಪ್ ಕೇಸ್ ಕುರಿತಂತೆ ನವ್ಯಶ್ರೀ ರಾವ್ಜೂನ್ 17ರ ಮಧ್ಯರಾತ್ರಿಯಲ್ಲಿ ಜಾನ್​ನನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆತರಲಾಗಿತ್ತು. ವೈದ್ಯೆ ಆತನನ್ನು ಪರೀಕ್ಷಿಸುವ ವೇಳೆ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ್ದ. ಕೂಡಲೇ ವೈದ್ಯೆಯು ಸಿಬ್ಬಂದಿಯ ಸಹಾಯದಿಂದ ಆತನ ಕೈ ಮತ್ತು ಕಾಲುಗಳನ್ನು ಕಟ್ಟಿ ಹಾಕಿದ್ದಾರೆ.ರಾತ್ರಿ ಸುಮ್ಮನಿದ್ದ ಜಾನ್​ ಬೆಳಗ್ಗೆ ರೋಗಿಗಳನ್ನು ಪರೀಕ್ಷಿಸಲು ವೈದ್ಯೆಯು ವೀಕ್ಷಣಾ ಕೊಠಡಿಗೆ ಬಂದಾಗ, ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ. ನಂತರ ಆಕೆ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪೊಲೀಸ್ ಸಹಾಯ ಠಾಣೆಗೆ ದೂರು ನೀಡಿದ್ದಾಳೆ. ಈ ವಿಷಯವನ್ನು ತಿಳಿದುಕೊಂಡ ಜಾನ್‌ ಅಲ್ಲಿಂದ ಪರಾರಿಯಾಗಿದ್ದಾನೆ.ಈ ಪ್ರಕರಣವನ್ನು ಗಾಂಧಿನಗರ ಪೊಲೀಸ್​ ಠಾಣೆಗೆ ವರ್ಗಾಯಿಸಲಾಗಿದ್ದು. ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ತನಿಖೆಯನ್ನು ತೀವ್ರಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಕೊಲ್ಲಂ ಜಿಲ್ಲೆಯ ತಾಲೂಕು ಆಸ್ಪತ್ರೆಯಲ್ಲಿ ಕಳೆದ ತಿಂಗಳು ಯುವ ವೈದ್ಯೆಯನ್ನು ರೋಗಿಯೊಬ್ಬ ಬರ್ಬರವಾಗಿ ಕೊಂದಿದ್ದ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
