ಚಿಮಕುರ್ತಿ:ಎಸಿ ಸ್ಫೋಟಗೊಂಡು ಮಹಿಳಾ ಉದ್ಯೋಗಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಚಿಮಕುರ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ಪ್ರಾರಂಭೋತ್ಸವಕ್ಕೆ ಮೆರುಗು ತಂದ ಚಿಣ್ಣರು; ಗುಲಾಬಿ, ಸಿಹಿ ಕೊಟ್ಟು ಸ್ವಾಗತಿಸಿದ ಶಿಕ್ಷಕರು
ಶ್ರೀದೇವಿ(52) ಮೃತ ದುರ್ದೈವಿಯಾಗಿದ್ದು, ಆಕೆಯ ಮಗ ಸಾಯಿತೇಜ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ಮಹಿಳೆಯು ಒಂಗೋಲು ಜಿಲ್ಲಾ ಪಂಚಾಯತಿ​ ಕಚೇರಿಯ ಪಿ.ಎಫ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು.
ಇದೇ ತಿಂಗಳ 28ರಂದು ರಾತ್ರಿ ತಾಯಿ ಮತ್ತು ಮಗ ಮನೆಯಲ್ಲಿ ಮಲಗಿದ್ದ ವೇಳೆ ತಡರಾತ್ರಿ ಹೈವೋಲ್ಟೇಜ್ ವಿದ್ಯುತ್ ಪೂರೈಕೆಯಿಂದಾಗಿ ಎಸಿ ಸ್ಫೋಟಗೊಂಡು ಇಬ್ಬರೂ ತೀವ್ರ ಅಸ್ವಸ್ಥಗೊಂಡಿದ್ದರು. ಮನೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ಅಕ್ಕಪಕ್ಕದವರು ತಾಯಿ ಹಾಗೂ ಮಗನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಒಂಗೋಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾಳೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
