ಡೆಹ್ರಾಡೂನ್​:ಎಳನೀರು ಕೊಡಲಿಲ್ಲ ಎಂಬ ಕಾರಣಕ್ಕೆ ಪೊಲೀಸ್​ ಪೇದೆಯೊಬ್ಬರ ಮಗನೊಬ್ಬನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಾಖಂಡದ ಕೋಟ್​ದ್ವಾರದಲ್ಲಿ ನಡೆದಿದೆ. ಮೃತ ಬಾಲಕನು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂದು ವರದಿಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿರುವುದಾಗಿ ವರದಿಯಾಗಿದೆ.
ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆಗಸ್ಟ್​ 31ರ ಶನಿವಾರ ಬಾಲಕ ಎಂದಿನಂತೆ ಶಾಲೆ ಮುಗಿಸಿಕೊಂಡು ಮನೆಗೆ ವಾಪಸ್​ ಆದ ಬಳಿಕ ಎಳನೀರು ಕೊಡುವಂತೆ ಕೇಳಿದ್ದಾನೆ. ಸಂಜೆಯಾಗಿದ್ದರಿಂದ ಆರೋಗ್ಯ ಸಮಸ್ಯೆ ಬರಬಹುದು ಎಂದು ಹೇಳಿ ಕುಟುಂಬಸ್ಥರು ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಟ್ರೈನಿ ವೈದ್ಯೆ ಹತ್ಯೆ ಕೇಸ್​; ಅತ್ಯಾಚಾರ ತಡೆ ಮಸೂದೆ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ
ಇದರಿಂದ ಬೇಸರಗೊಂಡ ಬಾಲಕ ತನ್ನ ಕೋಣೆಗೆ ಹೋಗಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ರೂಮಿಗೆ ಹೋಗಿ ಎಷ್ಟೊತ್ತಾದರೂ ಬಾಲಕ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಬಾಗಿಲು ತೆರೆದು ನೋಡಿದಾಗ ಆತ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಬಾಲಕನ ತಂದೆಯೂ ಚಮೋಲಿಯಲ್ಲಿ ಪೊಲೀಸ್​ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಘಟನೆ ನಡೆದಾಗ ಅವರು ಮನೆಯಲ್ಲಿ ಇರಲಿಲ್ಲ ಎಂದು ವರದಿಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 3 =
Remember me
