ನವದೆಹಲಿ:ಇಲ್ಲಿನ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್​ ಟೂರ್ನಿಯ ಪಂದ್ತಯದಲ್ಲಿ ಭಾರತ ತಂಡವು ಅಫ್ಘಾನಿಸ್ತಾನ ತಂಡದ ಎದುರು 8 ವಿಕೆಟ್​ಗಳ ಭರ್ಜರಿ ಜಯಗಳಿಸಿದೆ. ನಾಯಕ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಉಪಯುಕ್ತ ಆಟದಿಂದ ಭಾರತ ತಂಡವು 35 ಓವರ್​ಗಳಲ್ಲಿ ಗುರಿಯನ್ನು ತಲುಪಿ ಗೆಲುವಿನ ನಗೆ ಬೀರಿತ್ತು.
ಭಾರತ ಅಫ್ಘಾನಿಸ್ತಾನ ಪಂದ್ಯದ ವೇಳೆ ಮೈದಾನದಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯಾವ ಕಾರಣಕ್ಕೆ ಹೊಡೆದಾಟವಾಯಿತು ಎಂದು ಹಲವರು ಪ್ರಶ್ನಿಸಿದ್ದಾರೆ.
Fans getting authentic Delhi experience.pic.twitter.com/VIe09AGbHq
ವೈರಲ್ ಆಗಿರುವ ವಿಡಿಯೋದಲ್ಲಿ ಪಂದ್ಯ ನಡೆಯುವ ವೇಳೆ ಸ್ಟ್ಯಾಂಡ್​ನಲ್ಲಿ ನಿಂತಿರುವ ಕೆಲವು ಅಭಿಮಾನಿಗಳ ನಡುವೆ ಮೊದಲಿಗೆ ವಾಗ್ವಾದ ಶುರುವಾಗುತ್ತದೆ. ಇದಾದ ಕೆಲ ಹೊತ್ತಿನ ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಅಭಿನಾನಿಗಳ ನಡುವೆ ಹೊಡೆದಾಟವಾಗಿದ್ದು, ಯಾವ ಕಾರಣಕ್ಕೆ ಜಗಳವಾಯಿತು ಎಂಬ ಕಾರಣ ಬಹಿರಂಗವಾಗಿಲ್ಲ.
ಟ್ರೆಂಡುಲ್ಕರ್​ ಎಂಬ ಪೇಜ್​ನಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, 89 ಸಾವಿರಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಯಾವ ಕಾರಣಕ್ಕೆ ಹೊದೆಡಾಟವಾಯಿತು ಎಂಬ ವಿಚಾರದ ಕುರಿತು ಹಲವರು ಕಮೆಂಟ್​ ಮೂಲಕ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + eleven =
Remember me
