ಮುಂಬೈ:ಸಿನಿಇಂಡಸ್ಟ್ರಿ ನನ್ನನ್ನು ಬಹಿಷ್ಕರಿಸಿದೆ. ಇಂಥ ಪರಿಸ್ಥಿತಿಯಲ್ಲಿ ನನ್ನ ಜೊತೆ ಕಲಾವಿದರು ಸೇರಿದಂತೆ ಯಾರಾದರೂ ನಿಲ್ಲುವುದು ಸುಲಭವಲ್ಲ ಎಂದು ನಟಿ-ರಾಜಕಾರಣಿ ಕಂಗನಾ ರನೌತ್ ಹೇಳಿದರು.
ಇದನ್ನೂ ಓದಿ:ಕೋಲ್ಕತ್ತಾ ಟ್ರೈನಿ ವೈದ್ಯೆ ಕೊಲೆ ಪ್ರಕರಣ: ಮೌನ ಮುರಿದು ಗಂಭೀರ ಪ್ರಶ್ನೆಗಳನ್ನು ಎತ್ತಿದ ರಾಹುಲ್ ಗಾಂಧಿ!
ಕಂಗನಾ ತಮ್ಮ ‘ಎಮರ್ಜೆನ್ಸಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು, ತನಗೆ ಕಷ್ಟಕಾಲದಲ್ಲಿ ಬೆಂಬಲಿಸಿದ್ದಕ್ಕಾಗಿ ಎಲ್ಲ ಕಲಾವಿದರು, ಚಿತ್ರತಂಡಕ್ಕೆ ಧನ್ಯವಾದ ಹೇಳಿದರು.
ಕಂಗನಾ ರನೌತ್ ಅವರು ಹಿಂದಿ ಚಲನಚಿತ್ರೋದ್ಯಮದಿಂದ “ಬಹಿಷ್ಕಾರ” ಕ್ಕೆ ಒಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ತನ್ನನ್ನು ಬೆಂಬಲಿಸಿದವರು ದೇವರು ಮತ್ತು ದೇವತೆಗಳಂತೆ ಎಂದು ಅಭಿಪ್ರಾಯಪಟ್ಟರು.
ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದರೂ ಆಗಿರುವ ರನೌತ್ ‘ಎಮರ್ಜೆನ್ಸಿ’ ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿ, ಚಿತ್ರವನ್ನು ನಿರ್ದೇಶಿಸಿದ್ದಾರೆ. ಬುಧವಾರದಂದು ಟ್ರೇಲರ್ ಲಾಂಚ್ ಆಗಿರುವ ಈ ಸಿನಿಮಾ ಸೆಪ್ಟೆಂಬರ್ 6ರಂದು ಬಿಡುಗಡೆಯಾಗಲಿದೆ.
ಚಿತ್ರದಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ದ್ವೇಷದಿಂದ ಪ್ರೀತಿಯವರೆಗೆ..ಹಾಕಿ ದಂತಕಥೆ ಶ್ರೀಜೇಶ್ ಬಿಚ್ಚಿಟ್ಟ ಪ್ರೇಮಕಥೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 15 =
Remember me
