ನವದೆಹಲಿ:ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ 1.18 ಲಕ್ಷ ಕೋಟಿಯ ರು. 2024–25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ.
ಇದನ್ನೂ ಓದಿ:ರೋಗಿಗೆ ‘ಪೋಕಿರಿ’ ಸಿನಿಮಾ ತೋರಿಸುತ್ತಾ ಬ್ರೈನ್ ಟ್ಯೂಮರ್ ಆಪರೇಷನ್!
ಈ ಮಧ್ಯಂತರ ಬಜೆಟ್​ 20.760 ಕೋಟಿ ಆರ್ಥಿಕ ಕೊರತೆ ಬಜೆಟ್ ಮಂಡಿಸಿದ್ದರೂ ಮತ್ತು ಒಟ್ಟು ರಾಜ್ಯದ ರಾಜ್ಯದ ಜಿಡಿಪಿ ಶೇ 7.5ರ ದರದಲ್ಲಿ ಬೆಳವಣಿಗೆಯನ್ನು ಕಲ್ಪಿಸಲಿದೆ ಎಂದು ಹೇಳಿದರು.
ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ನ ಪ್ರಕಾರ ಹಣಕಾಸು ವರ್ಷದ ಬಂಡವಾಳ ವೆಚ್ಚ 38,566 ಕೋಟಿ ಎಂದು ಅಂದಾಜಿಸಿದ್ದು, ಇದು ಜಿಎಸ್‌ಡಿಪಿಯ ಶೇ 14.64ರಷ್ಟಿದೆ ಎಂದಿದ್ದಾರೆ. ತೆರಿಗೆ ಹಾಗೂ ಇನ್ನಿತರ ಮೂಲಗಳಿಂದ ಒಟ್ಟು 97,861 ಸಂಗ್ರಹವಾಗಲಿದೆ ಎಂದು ಅಂದಾಜಿಸಿದ್ದಾರೆ.
‘ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಕೇಂದ್ರೀಕರಣದ ಆಡಳಿತ, ಅಂತರ್ಗತ ಅಭಿವೃದ್ಧಿ, ಆದಾಯ ಮೂಲಗಳ ಉತ್ತೇಜನಕ್ಕೆ 2019ರಲ್ಲಿ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ. ಆ ಮೂಲಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ’ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
‘ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಜತೆಗೆ ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೂ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಮತ್ತು ಶೂನ್ಯ ಸಹಿಷ್ಣುತೆ ಹೊಂದುವ ನೀತಿಯನ್ನು ಸರ್ಕಾರ ಅಳವಡಿಸಿಕೊಂಡಿದೆ. ಇದೆಲ್ಲದರ ಪರಿಣಾಮ ಕಣಿವೆ ರಾಜ್ಯದಲ್ಲಿ ಸುರಕ್ಷತೆ ಹಚ್ಚಿದೆ’ ಎಂದು ತಮ್ಮ ಬಜೆಟ್‌ ಮಂಡನೆ ಸಂದರ್ಭದಲ್ಲಿ ಹೇಳಿದ್ದಾರೆ.
“ಸರ್ಕಾರವು ಏಕಕಾಲದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವಾಗ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸುತ್ತಿದೆ. ಸರ್ಕಾರವು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅಳವಡಿಸಿಕೊಂಡಿದೆ” ಎಂದು ಸೀತಾರಾಮನ್ ಹೇಳಿದರು.
PAN-Aadhaar ಕಾರ್ಡ್ ಲಿಂಕ್​ ಮಾಡದ ಜನ: ಕೇಂದ್ರಕ್ಕೆ ಬಂದ ಲಾಭಾಂಶ ಕೇಳಿದ್ರೆ ಬೆರಗಾಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 20 =
Remember me
