ನಾಸಿಕ್​:ಮಹಾರಾಷ್ಟ್ರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಲಾರಂಭಿಸಿದೆ. ಪ್ರತಿ ಜಿಲ್ಲೆಯಲ್ಲೂ ಅನೇಕ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದೀಗ ಈ ಜಿಲ್ಲೆಯ ಮಾರ್ಕೆಟ್​ನಲ್ಲಿ ಒಂದು ಗಂಟೆಗಿಂತ ಹೆಚ್ಚು ಹೊತ್ತು ಕಾಲ ಕಳೆದರೂ ಫೈನ್​ ಬೀಳಲಿದೆ. ಅಂತದ್ದೊಂದು ನಿಯಮವನ್ನು ಜಿಲ್ಲಾಡಳಿತ ಮಾಡಿದೆ.
ಮಹಾರಾಷ್ಟ್ರದ ನಾಸಿಕ್​ನಲ್ಲಿ ಇಂತಹ ಕಠಿಣ ನಿಯಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಮಾರುಕಟ್ಟೆಗಳಿಗೆ ಬರುವ ಜನರಿಗೆ ಎರಡು ಪ್ರತ್ಯೇಕ ದ್ವಾರಗಳನ್ನು ನಿರ್ಮಿಸಲಾಗಿದೆ. ಒಂದು ದ್ವಾರದಲ್ಲಿ ಬರುವವರು ಇನ್ನೊಂದು ದ್ವಾರದಲ್ಲಿ ಹೋಗಬೇಕು. ಮಾರುಕಟ್ಟೆಗೆ ಬರುವಾಗ ಐದು ರೂಪಾಯಿಯ ಟಿಕೆಟ್​ ಖರೀದಿಸಬೇಕು. ಅದರಲ್ಲಿ ಸಮಯವನ್ನು ನಮೂದಿಸಲಾಗಿರುತ್ತದೆ. ವಾಪಾಸು ಹೋಗುವಾದ ಟಿಕೆಟ್​ ಪರಿಶೀಲಿಸಲಾಗುವುದು. ಯಾರು ಒಂದು ಗಂಟೆಗಿಂತ ಹೆಚ್ಚು ಹೊತ್ತು ಮಾರುಕಟ್ಟೆಯಲ್ಲಿರುತ್ತಾರೋ ಅವರಿಗೆ ತಲಾ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
ನಾಸಿಕ್​ನಲ್ಲಿ ಸೋಮವಾರ 2,847 ಕರೊನಾ ಪ್ರಕರಣಗಳು ದೃಢವಾಗಿವೆ. ಈ ಮೂಲಕ ಜಿಲ್ಲೆಯ ಒಟ್ಟಾರೆ ಸೋಂಕಿತರ ಸಂಖ್ಯೆ 1,74,682ಕ್ಕೆ ಏರಿಕೆಯಾಗಿದೆ. (ಏಜೆನ್ಸೀಸ್​)
ಗೂಗಲ್‌ ಸರ್ಚ್‌ ಮಾಡುವಾಗ ಬಯಲಾಯ್ತು ಹೆಂಡತಿ ಅಕ್ರಮ ಸಂಬಂಧ! ಬಯಲು ಶೌಚಕ್ಕೆ ಹೋದವನೂ ಸೆರೆಸಿಕ್ಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
