ಭೋಪಾಲ್​:ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ಪೆಟ್ರೋಲ್​, ಡೀಸೆಲ್​ಗಳ ಬೆಲೆ ಸತತವಾಗಿ ಏರುತ್ತಿರುವದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರ ಮತ್ತು ಮಧ್ಯಪ್ರದೇಶ ರಾಜ್ಯಸರ್ಕಾರದ ವಿರುದ್ಧ ‘ಸೈಕಲ್​’ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್​ ಮುಖಂಡನ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಯಾವುದೇ ಪ್ರತಿಭಟನೆ ನಡೆಸುವುದಿದ್ದರೂ ಅನುಮತಿ ತೆಗೆದುಕೊಳ್ಳಬೇಕು. ಅದರಲ್ಲೂ ಕರೊನಾ ವೈರಸ್​ ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಗುಂಪು ಸೇರುವುದನ್ನೆಲ್ಲ ನಿಷೇಧಿಸಲಾಗಿದೆ. ಆದರೆ ದಿಗ್ವಿಜಯ ಸಿಂಗ್​ ಯಾವುದೇ ಅನುಮತಿ ಪಡೆದಿರಲಿಲ್ಲ.ಇದನ್ನೂ ಓದಿ:ರಾಹುಲ್‌ ಗಾಂಧಿಯೇ ಪಕ್ಷ ಮುನ್ನಡೆಸಲಿ: ಸಚಿನ್‌ ಪೈಲಟ್‌
ರಾಜ್ಯಸಭಾ ಸದಸ್ಯರೂ ಆಗಿರುವ ದಿಗ್ವಿಜಯ ಸಿಂಗ್​ ಅವರು ಹಲವು ಕಾಂಗ್ರೆಸ್​ ಸದಸ್ಯರೊಂದಿಗೆ ಸೇರಿ ಸೈಕಲ್​ ತುಳಿಯುತ್ತ, ಪ್ರತಿಭಟನೆ ನಡೆಸುತ್ತಿದ್ದರು. ಇವರೆಲ್ಲ ರೋಶನ್​ಪುರ ಚೌಕದಿಂದ ಮುಖ್ಯಮಂತ್ರಿ ಶಿವರಾಜ್ ಚೌಹಾಣ್​ ಅವರ ನಿವಾಸಕ್ಕೆ ಸೈಕಲ್​​ನಲ್ಲಿ ತೆರಳುತ್ತಿದ್ದರು.ಇದನ್ನೂ ಓದಿ:ಭಾರತ-ಚೀನಾ ಗಡಿ ಬಿಕ್ಕಟ್ಟು: ಪರಿಸ್ಥಿತಿ ಗಂಭೀರವಾಗಿದೆ ಎಂದ ಬ್ರಿಟಿಷ್​ ಪ್ರಧಾನಿ
ಮಾರ್ಗ ಮಧ್ಯೆಯಲ್ಲಿಯೇ ತಡೆದ ಪೊಲೀಸರು ಅವರನ್ನೆಲ್ಲ ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿದ್ದಾರೆ. (ಏಜೆನ್ಸೀಸ್​)
50ಸಾವಿರದ ಗಡಿ ದಾಟಿದ ಚಿನ್ನದ ದರ..ಮುಂದಿನ ವಾರ ಇನ್ನೂ ಹೆಚ್ಚಾಗುವ ನಿರೀಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
